ಉದಯವಾಹಿನಿ, ಬೀಜಿಂಗ್(ಚೀನಾ): ಇಲ್ಲಿನ ಹುನಾನ್ ಪ್ರಾಂತ್ಯದಲ್ಲಿರುವ ಲಿಯುಯಾಂಗ್ ನಗರದ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾರಿ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಕನಿಷ್ಠ 21 ಮಂದಿ ಸಾವನ್ನಪ್ಪಿದ್ದಾರೆ. 61ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಗುವಾಂಡು ಟೌನ್‌ಶಿಪ್‌ನಲ್ಲಿರುವ ಲಿಯುಯಾಂಗ್ ಹುವಾಶೆಂಗ್ ಪಟಾಕಿ ಉತ್ಪಾದನಾ ಮತ್ತು ಪ್ರದರ್ಶನ ಕೇಂದ್ರದಲ್ಲಿ ಸೋಮವಾರ ಸಂಜೆ 5 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.ಕಳೆದ ತಿಂಗಳು ಕೇರಳಂ, ತಮಿಳುನಾಡಿನಲ್ಲೂ ನಡೆದಿತ್ತು ಪಟಾಕಿ ದುರಂತ: ಕೇರಳಂನ ಮುಂಡತಿಕ್ಕೋಡ್‌ ಎಂಬಲ್ಲಿನ ಪಟಾಕಿ ತಯಾರಿಕಾ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿ 13 ಜನರು ಸಾವನ್ನಪ್ಪಿದ್ದ ಘಟನೆ ಕಳೆದ ತಿಂಗಳು ನಡೆದಿತ್ತು. ತ್ರಿಶೂರ್ ಪೂರಂ ಉತ್ಸವಕ್ಕೆ ತಯಾರಿ ನಡೆಯುತ್ತಿದ್ದ ಸ್ಥಳದಲ್ಲೇ ಸ್ಫೋಟ ಸಂಭವಿಸಿದೆ.ಕೇರಳಂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳ ಪ್ರಕಾರ 13 ಕಾರ್ಮಿಕರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತ್ರಿಶೂರ್ ಪೂರಂ ಉತ್ಸವದಲ್ಲಿ ಪಟಾಕಿ ಪ್ರದರ್ಶನಕ್ಕಾಗಿ ಇಲ್ಲಿನ ಗೋದಾಮಿನಲ್ಲಿ ಬೃಹತ್ ಪ್ರಮಾಣದ ಗನ್‌ಪೌಡರ್ ಸಂಗ್ರಹಿಸಿಡಲಾಗಿತ್ತು ಎಂದು ತಿಳಿದು ಬಂದಿದೆ.

ತಮಿಳುನಾಡಿನ ವಿರುಧ್‌ನಗರದ ಕಟ್ಟನಾರಪಟ್ಟಿ ಎಂಬಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಕಳೆದ ತಿಂಗಳ ಭೀಕರ ಸ್ಫೋಟ ಸಂಭವಿಸಿ 25 ಜನರು ಸಾವನ್ನಪ್ಪಿದ್ದರು. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ನಾಲ್ಕು ಕೊಠಡಿಗಳು ಸಂಪೂರ್ಣವಾಗಿ ಛಿದ್ರಗೊಂಡಿದ್ದವು. ಸುಮಾರು 10 ಕಿಲೋ ಮೀಟರ್ ದೂರದವರೆಗೂ ಕಂಪನದ ಅನುಭವವಾಗಿದೆ ಎಂದು ಜನರು ತಿಳಿಸಿದ್ದರು.

Leave a Reply

Your email address will not be published. Required fields are marked *

error: Content is protected !!