ಉದಯವಾಹಿನಿ, ಕೋಲ್ಕತ್ತಾ: ಮಮತಾ ಬ್ಯಾನರ್ಜಿಯವರನ್ನು ಭವಾನಿಪುರದಲ್ಲಿ ಸೋಲಿಸಿದ್ದಕ್ಕೆ ನನ್ನ ಪಿಎ ಚಂದ್ರನಾಥ್ ರಥ (ಅವರನ್ನು ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಗಂಭಿರ ಆರೋಪ ಮಾಡಿದ್ದಾರೆ.
ರಥ ಅವರ ಮೃತದೇಹವನ್ನು ಆಸ್ಪತ್ರೆಯಿಂದ ಮಧ್ಯಮಗ್ರಾಮದಲ್ಲಿರುವ ಅವರ ನಿವಾಸಕ್ಕೆ ತರುವಾಗ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಕೊಲೆ ನಡೆದ ರೀತಿಯನ್ನು ನಾವು ಎಷ್ಟು ಖಂಡಿಸಿದರೂ ಸಾಲದು. ನನ್ನ ಸಹಾಯಕರಾಗಿದ್ದಕ್ಕೆ ರಥ ಅವರನ್ನು ಕೊಲ್ಲಲಾಗಿದೆ. ಈ ಕೊಲೆ ಪೂರ್ವಯೋಜಿತ ಎಂದು ದೂರಿದರು.
ಹತ್ಯೆ ಮಾಡಿದವರನ್ನು ಬಂಧಿಸಬೇಕು. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂಬುದು ಕುಟುಂಬದ ಬೇಡಿಕೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಅವರ ಮೇಲೆ 4 ಗುಂಡುಗಳು ಹಾರಿಸಲಾಗಿದೆ ಎಂದು ತಿಳಿದುಬಂದಿದೆ. ನಾನು ಅವರ ಕುಟುಂಬದ ಜೊತೆ ನಿಲ್ಲುತ್ತೇನೆ ಎಂದು ಇದೇ ವೇಳೆ ಭರವಸೆ ನೀಡಿದ್ದಾರೆ.
ಹಲವಾರು ದಿನಗಳ ಕಾಲ ಗಮನಿಸಿ ಸಂಚು ರೂಪಿಸಿ ಈ ದಾಳಿ ನಡೆಸಲಾಗಿದೆ. ಅವರ ಮೇಲೆ ಗುಂಡು ಹಾರಿಸುವ ಮೊದಲು ಕಾರನ್ನು ಹಿಂಬಾಲಿಸಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಹತ್ತಿರದಿಂದ ಗುಂಡುಗಳನ್ನು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ. ಸಾವನ್ನು ಖಚಿತಪಡಿಸಿಕೊಳ್ಳಲು ಇಷ್ಟು ಹತ್ತಿರದಿಂದ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!