ಉದಯವಾಹಿನಿ, ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ದಳಪತಿ ವಿಜಯ್ ಗೆಲುವು ಸಖತ್ ಕ್ರೇಜ್ ಹುಟ್ಟುಹಾಕಿದೆ. ದಶಕಗಳ ಇತಿಹಾಸ ಹೊಂದಿರುವ ಡಿಎಂಕೆ ಮತ್ತು ಎಐಎಡಿಎಂಕೆಯಂತಹ ಪ್ರಬಲ ಪಕ್ಷಗಳನ್ನು ಹಿಂದಿಕ್ಕಿ ಗೆಲುವಿನ ಪತಾಕೆ ಹಾರಿಸಿದ್ದಾಗಿದೆ. ಈ ರಾಜಕೀಯ ವಿಜಯೋತ್ಸವದ ಸಮಯದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವ ಮತ್ತೊಂದು ಹೆಸರು ‘ತ್ರಿಷಾ’.
ಹೌದು, ವಿಜಯ್ ಯಶಸ್ಸಿನ ಬೆನ್ನಲ್ಲೇ ನಾಯಕಿ ತ್ರಿಷಾ ಸ್ವತಃ ಅವರ ಮನೆಗೆ ಭೇಟಿ ನೀಡಿ ಅಭಿನಂದಿಸಿದ್ದು, ಈಗ ಸೋಷಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸಿದೆ. ಇದು ಕೇವಲ ಅಭಿನಂದನೆಗಳಿಗೆ ಸೀಮಿತವಾಗಿಲ್ಲ, ಇದರ ಹಿಂದೆ ದೊಡ್ಡ ರಾಜಕೀಯ ಸಮೀಕರಣವಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಅತ್ಯಂತ ಕುತೂಹಲಕಾರಿ ಸುದ್ದಿಯೆಂದರೆ ತ್ರಿಷಾ ಶೀಘ್ರದಲ್ಲೇ ರಾಜಕೀಯ ಪ್ರವೇಶಿಸಲಿದ್ದಾರೆ. ವಿಜಯ್ ಸಂಪುಟದಲ್ಲಿ ಅವರಿಗೆ ಪ್ರಮುಖ ಸ್ಥಾನ ಸಿಗಲಿದೆ. ಒಂದು ಹಂತದಲ್ಲಿ ತ್ರಿಷಾ ತಮಿಳುನಾಡಿನ ‘ಉಪ ಮುಖ್ಯಮಂತ್ರಿ’ ಆಗಲಿದ್ದಾರೆ ಎಂಬ ಊಹಾಪೋಹಗಳೂ ಹೆಚ್ಚಾಗಿವೆ.

Leave a Reply

Your email address will not be published. Required fields are marked *

error: Content is protected !!