ಉದಯವಾಹಿನಿ, ಕೆಲವೇ ದಿನಗಳ ಹಿಂದಷ್ಟೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಐಪಿಎಲ್ ಪಂದ್ಯದ ವೇಳೆ ತಂಡದ ಡ್ರೆಸ್ಸಿಂಗ್ ರೂಮ್ ಒಳಗೆ ಇ-ಸಿಗರೇಟ್ ಸೇದಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ನ್ಯೂ ಚಂಡೀಗಢದಲ್ಲಿ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪರಾಗ್ ನಿಷೇಧಿತ ಇ- ಸಿಗರೇಟ್ ಸೇದಿ ಸಿಕ್ಕಿಬಿದ್ದಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ಕ್ರಮಕ್ಕೆ ಮುಂದಾಗಿದ್ದ ಬಿಸಿಸಿಐ, ರಿಯಾನ್ ಪರಾಗ್​ಗೆ ಪಂದ್ಯ ಶುಲ್ಕ ಶೇಕಡಾ 25 ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಿತ್ತು. ಈ ಪ್ರಕರಣ ಮಾಸುವ ಮುನ್ನವೇ ಪಂಜಾಬ್ ಕಿಂಗ್ಸ್ ತಂಡದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಇದೇ ರೀತಿಯ ಕೃತ್ಯ ಎಸಗಿದ್ದು, ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ವಿಮಾನದಲ್ಲಿ ಇ-ಸಿಗರೇಟ್ ಸೇದಿದ ಚಾಹಲ್
ಯುಜ್ವೇಂದ್ರ ಚಾಹಲ್ ವಿಮಾನದಲ್ಲಿ ಇ-ಸಿಗರೇಟ್ ಸೇದುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರವಾಸದ ಸಮಯದಲ್ಲಿ ಈ ವಿಡಿಯೋ ತೆಗೆಯಲಾಗಿದೆ ಎಂದು ಹೇಳಲಾಗುತ್ತಿದೆ. ತಂಡವು ಸ್ವತಃ ಈ ವಿಡಿಯೋವನ್ನು ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಚಾಹಲ್ ಇ-ಸಿಗರೇಟ್ ಸೇದುತ್ತಿರುವುದು ಕಂಡುಬಂದಿದೆ. ತಂಡಕ್ಕೆ ಘಟನೆಯ ಅರಿವಾದ ತಕ್ಷಣ, ವೀಡಿಯೊವನ್ನು ಸೋಶಿಯಲ್ ಮೀಡಿಯಾದಿಂದ ತೆಗೆದುಹಾಕಲಾಗಿದೆ. ಆದರೆ ಆ ಹೊತ್ತಿಗೆ, ಅನೇಕ ನೆಟ್ಟಿಗರು ಆ ವಿಡಿಯೋವನ್ನು ಡೌನ್‌ಲೋಡ್ ಮಾಡಿಕೊಂಡಿದ್ದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!