ಉದಯವಾಹಿನಿ, ಬೆಂಗಳೂರು: ಕೊನೆಗೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಕೂಡಿಬಂದಿದೆ. ಮುಂದಿನ ಜೂನ್‌ 14 ರಿಂದ 24ರ ಒಳಗೆ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ ಸೂಚನೆ ನೀಡಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ಕರೆಯಲಾಗಿತ್ತು.ಜಿಬಿಎ ಅಧ್ಯಕ್ಷರಾಗಿರುವ ಸಿಎಂ ಹಾಗೂ ಡಿಸಿಎಂ ಸಭೆಗೆ ಗೈರಾಗಿದ್ದರು. ಈ ಹಿನ್ನೆಲೆ ರಾಜ್ಯ ಚುನಾವಣಾ ಆಯುಕ್ತ ಜಿ.ಎ ಸಂಗ್ರೇಶಿ ನೇತೃತ್ವದಲ್ಲಿ ಸಭೆ ನಡೆಯಿತು. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿ.ಎ ಸಂಗ್ರೇಶಿ ಅವರು, ಜೂನ್ 14 ರಿಂದ 24ರ ಒಳಗೆ ಚುನಾವಣೆ ದಿನಾಂಕ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯ ಚುನಾವಣಾ ಆಯೋಗವು ಜಿಬಿಎ ಜೊತೆ ಸಮಾಲೋಚಿಸಿ ದಿನಾಂಕ ನಿಗದಿಯಾಗಬೇಕು ಅನ್ನೋ ಕಾನೂನು ಇತ್ತು. ಆದಕಾರಣ ಇಂದು ಸಭೆ ನಡೆಸಿದ್ದೇವೆ. ಚುನಾವಣೆ ನಡೆಸಲು ಎಲ್ಲಾ ಕ್ರಮ ತೆಗೆದುಕೊಂಡಿದ್ದೇವೆ. ದಿನಾಂಕ ನಿಗದಿ ಮಾತ್ರ ಬಾಕಿ ಅನ್ನೋದು ಜಿಬಿಎಯೂ ತಿಳಿಸಿದೆ. ಜನಗಣತಿ, ಮನೆ ಸೇರಿದಂತೆ ಅನೇಕ ಕಾರ್ಯ ಇರೋದ್ರಿಂದ ಸಮಯ ನೋಡಿ ದಿನಾಂಕ ನಿಗದಿ ಪಡಿಸಿ ಅಂತಾ ಜಿಬಿಎಗೆ ಹೇಳಿದೆ. ಆದ್ರೆ ವೇಳಾಪಟ್ಟಿ ನೋಡಲು ಸಾಧ್ಯವಿಲ್ಲ. ಜೂನ್ -30 ರೊಳಗೆ ಚುನಾವಣೆ ದಿನಾಂಕ ನಿಗದಿ ಪಡಿಸಬೇಕು ಅಂತಾ ಹೇಳಿದ್ದೇವೆ. ಸುಪ್ರೀಂ ಕೋರ್ಟ್ ಗೆ ನಾವು ಇದನ್ನು ತಿಳಿಸಬೇಕಾಗಿದೆ ಎಂದು ವಿವರಿಸಿದರು.

Leave a Reply

Your email address will not be published. Required fields are marked *

error: Content is protected !!