ಉದಯವಾಹಿನಿ, ಬೆಂಗಳೂರು: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ದೇವಸ್ಥಾನಕ್ಕೆ ಬಿಎಂಟಿಸಿ ಬಸ್ ಗುದ್ದಿದ ಘಟನೆ ಬೆಂಗಳೂರಿನ ಬೃಂದಾವನ ಬಸ್ ನಿಲ್ದಾಣದ ಬಳಿ ನಡೆದಿದೆ.
ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಘಟಕ 9ಕ್ಕೆ ಸೇರಿದ ಬಿಎಂಟಿಸಿ ಬಸ್ 8ನೇ ಮೈಲಿಯಿಂದ ಹೇರೋಹಳ್ಳಿ ಕ್ರಾಸ್‌ಗೆ ತೆರಳುತ್ತಿದ್ದಾಗ ಏಕಾಏಕಿ ಎದುರಿನಿಂದ ಬೈಕ್ ಬಂದಿದೆ. ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಶಿವ ದೇಗುಲಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಗುದ್ದಿದ ಪರಿಣಾಮ ಶಿವನ ದೇಗುಲದ ಕಾಂಪೌಂಡ್ ಹಾಗೂ ಗ್ರಿಲ್‌ಗೆ ಹಾನಿಯಾಗಿದೆ. ಅಪಘಾತದಿಂದ ಬೈಕ್ ಸವಾರನ ಬಲಗೈಗೆ ತರಚಿದ ಗಾಯಗಳಾಗಿದೆ. ಬಸ್ ಚಾಲಕ ಹಾಗೂ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.
