ಉದಯವಾಹಿನಿ, ಬೆಂಗಳೂರು: ಮಕ್ಕಳ ಗುಂಪೊಂದು ಆಟವಾಡುತ್ತಿರುವಾಗ ಕಾಂಪೌಂಡ್ ಗೇಟ್ ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ. ಅವಘಡದಲ್ಲಿ ಗೌಸಿಯಾ ಎಂಬ 5 ವರ್ಷದ ಮಗು ಸಾವನ್ನಪ್ಪಿದೆ. ಅಣ್ಣ ಇಮಾಮ್, ತಂಗಿ ಶಕಿಲಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ 3 ವರ್ಷದ ಮಗು ಸುಮಯ್ ಸ್ಥಿತಿ ಗಂಭೀರವಾಗಿದೆ.

ಇಮಾಮ್ ರಮೀಜಾ ದಂಪತಿ ಮಗು ಗೌಸಿಯಾ. ಇವರು ಕಳೆದ 5 ತಿಂಗಳ ಹಿಂದೆಯಷ್ಟೇ ಬಾಡಿಗೆ ಮನೆಗೆ ಬಂದಿದ್ದರು. ಬಸ್ ನಿಲ್ದಾಣದ ಬಳಿ ಹಣ್ಣಿನ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದ ದಂಪತಿ, ರವಿಶಂಕರ್ ಎಂಬುವವರಿಗೆ ಸೇರಿದ್ದ ಮನೆಯಲ್ಲಿ ವಾಸವಾಗಿದ್ದರು.ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!