ಉದಯವಾಹಿನಿ, ಐಪಿಎಲ್ ಈ ಆವೃತ್ತಿಯಲ್ಲಿ ತಂಡವಾಗಿ ಲಕ್ಕೋ ಸೂಪರ್‌ಜೈಂಟ್ಸ್ ನಿರೀಕ್ಷಿತ ಪ್ರದರ್ಶನ ನೀಡದಿದ್ದರೂ, ಕೆಲ ಆಟಗಾರರ ವೈಯಕ್ತಿಕ ಆಟ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದೆ.
ಅದರಲ್ಲೂ ಯುವ ವೇಗಿ ಪ್ರಿನ್ಸ್ ಯಾದವ್ ತಮ್ಮ ಶಿಸ್ತುಬದ್ಧ ಬೌಲಿಂಗ್ ಮೂಲಕ ವಿಶೇಷ ಮೆಚ್ಚುಗೆ ಗಳಿಸಿದ್ದಾರೆ. ಪ್ರಮುಖ ಕ್ಷಣಗಳಲ್ಲಿ ವಿಕೆಟ್ ಕಬಳಿಸುವ ಸಾಮರ್ಥ್ಯದಿಂದ ಅವರು ಇದೀಗ ರಾಷ್ಟ್ರೀಯ ತಂಡದ ಆಯ್ಕೆ ಚರ್ಚೆಯಲ್ಲಿದ್ದಾರೆ.
ಈ ಸೀಸನ್‌ನಲ್ಲಿ ಲಕ್ಷ್ಮೀ ಪರ ಆಡಿದ 10 ಪಂದ್ಯಗಳಲ್ಲಿ ಪ್ರಿನ್ಸ್ ಯಾದವ್ 16 ವಿಕೆಟ್ ಪಡೆದು ಮಿಂಚಿದ್ದಾರೆ. ಕಡಿಮೆ ರನ್ ನೀಡುತ್ತಾ ಎದುರಾಳಿ ಬ್ಯಾಟರ್‌ಗಳ ಮೇಲೆ ಒತ್ತಡ ಹೇರುವಲ್ಲಿ ಅವರು ಯಶಸ್ವಿಯಾಗಿದ್ದು, ಆರ್‌ಸಿಬಿ ವಿರುದ್ಧದ ಪಂದ್ಯದಲ್ಲೂ ಮೂರು ಮಹತ್ವದ ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ದೊಡ್ಡ ಪಾತ್ರವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!