ಉದಯವಾಹಿನಿ, ಚಿಕ್ಕೋಡಿ: ತಾಲೂಕಿನವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಬಿರುಗಾಳಿಯ ಅಬ್ಬರಕ್ಕೆ ಚಿಕ್ಕೋಡಿ – ಹುಕ್ಕೇರಿ ರಸ್ತೆಯ ಸಂಕೇಶ್ವರ ಕ್ರಾಸ್ ಬಳಿ ರಸ್ತೆ ಮೇಲೆ ಬೃಹದಾಕಾರದ ಮರ ನೆಲಕ್ಕರುಳಿದೆ.ಸ್ಥಳಕ್ಕೆ ಚಿಕ್ಕೋಡಿ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ, ಮರವನ್ನು ತೆಗೆಯುವ ಕಾರ್ಯ ಮಾಡಿದ್ದಾರೆ. ಸುಮಾರು 2 ಗಂಟೆಗಳ ಬಳಿಕ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.
ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಇಂದು ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಮಳೆಯಾಗಿದೆ.

 

Leave a Reply

Your email address will not be published. Required fields are marked *

error: Content is protected !!