
ಉದಯವಾಹಿನಿ ಸಿಂಧನೂರು : ನಗರದ ಶಿವಜ್ಯೋತಿ ನಗರದ ಎಸ್ ಟಿ ಹಾಸ್ಟೆಲ್ ಪಕ್ಕದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಕಳೆದ ಹಲವು ದಿನಗಳಿಂದ ನಾನಾ ಸಮಸ್ಯೆಗಳು ಬಾಧಿಸುತ್ತಿದ್ದು, ಇದರಿಂದ ವಿದ್ಯಾರ್ಥಿನಿಯರ ಅಭ್ಯಾಸಕ್ಕೆ ತೊಂದರೆ ಅನುಭವಿಸುವಂತಾಗಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ(KVS) ಪ್ರತಿಭಟನೆ ಮಾಡುತ್ತಾ ತಾಲ್ಲೂಕು ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು ನಂತರ ಮಾತನಾಡಿದ ವಿದ್ಯಾರ್ಥಿನಿ ಹಾಸ್ಟೆಲ್ ವಾರ್ಡನ್ ಅಸಮರ್ಪಕ ಕಾರ್ಯನಿರ್ವಹಣೆ, ಮೂಲ ಭೂತ ಸೌಕರ್ಯಗಳ ಕೊರತೆ ಹಾಗೂ ಅನಗತ್ಯ ಕಿರುಕುಳದಿಂದ ವಿದ್ಯಾರ್ಥಿನಿಯರಾದ ನಾವೆಲ್ಲರೂ ಬೇಸತ್ತಿದ್ದು, ಇದು ಅವರ ವಿದ್ಯಾಭ್ಯಾಸದ ಮೇಲೆ ಮತ್ತು ಪರೀಕ್ಷಾ ಫಲಿತಾಂಶದ ಮೇಲೆ ವ್ಯತಿರಿಕ್ತಿ ಪರಿಣಾಮ ಬೀರುತ್ತಿದೆ ಎಂದು ಹೇಳಿದರುಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮೌಖಿಕವಾಗಿ ತಿಳಿಸಿ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಿದರೂ ನಿರ್ಲಕ್ಷ್ಯ ವಹಿಸಲಾಗಿದೆ. ಸಮಸ್ಯೆಗಳ ಕಾರಣದಿಂದ ಹಾಸ್ಟೆಲ್‌ನ ವಿದ್ಯಾರ್ಥಿನಿಯರು ದಿನವೂ ಯಾತನೆ ದಿನದಿಂದ ದಿನಕ್ಕೆ ಪರಿಸ್ಥಿತಿಗೆ ಬಿಗಡಾಯಿಸುತ್ತಿದೆ. ಸಮಸ್ಯೆಗಳು ವಿಕೋಪಕ್ಕೆ ಹೋಗಿ ಪರಿಸ್ಥಿತಿ ಸಂಪೂರ್ಣ ಹದಗೆಡುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಕರ್ನಾಟಕ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿನಿಯರ ಪರವಾಗಿ ಆಗ್ರಹಿಸುತ್ತದೆ. ಹಾಸ್ಟೆಲ್ ನಲ್ಲಿರುವ ಎಲ್ಲ ಸಮಸ್ಯೆಗಳನ್ನು 15 ದಿನದೊಳಗೆ ಈಡೇರಿಸಬೇಕು, ನಿರ್ಲಕ್ಷ್ಯ ಧೋರಣೆ ತೋರಿದರೆ – ಸಂಘಟನೆಯಿಂದ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು ಈ ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಯ ಹೋರಾಟಗಾರ ಬಿ ಎನ್ ಯರಿದಿಹಾಳ ರಾಜ್ಯ ಸಂಘಟನೆ ರಾಜ್ಯ ಸಮಿತಿ ಸದಸ್ಯ ಚಾಂದ್ ಪಾಷ ವಿದ್ಯಾರ್ಥಿನಿಯರಾದ ರಾಡಿಯಾ. ತಸ್ಲಿಮ್ ನೇತ್ರಾವತಿ ರೇಷ್ಮಾ ಸಬಜಲಿ ಸಾಬ್ ಬಸವರಾಜ ಬಾದರ್ಲಿ ರಾಜಾ ನಾಯಕ್ ಅಬ್ದುಲ್ ಸಮ್ಮದ್ ಚೌದ್ರಿ ಇದ್ದರು
