ಉದಯವಾಹಿನಿ, ಕಠ್ಮಂಡು: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದೆ.
ಇಸ್ತಾನ್‌ಬುಲ್‌ನಿಂದ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನದಲ್ಲಿ 11 ಜನ ಸಿಬ್ಬಂದಿ ಹಾಗೂ 278 ಪ್ರಯಾಣಿಕರಿದ್ದರು. ಲ್ಯಾಂಡ್ ಆಗುವಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇರಿದಂತೆ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ವಿಮಾನದ ಲ್ಯಾಂಡ್ ಆಗುವಾಗ ಬಲಭಾಗದ ಟೈರ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಅಷ್ಟರಲ್ಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನೆಯ ಬಗ್ಗೆ ಟರ್ಕಿಶ್ ವಿಮಾನಯಾನ ಸಂಸ್ಥೆ ಹಾಗೂ ವಿಮಾನ ನಿಲ್ದಾಣ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ಇದಕ್ಕೂ ಮುನ್ನ 2015ರಲ್ಲಿ, ಇದೇ ವಿಮಾನಯಾನ ಕಂಪನಿಯ ವಿಮಾನವು ಲ್ಯಾಂಡಿಂಗ್ ವೇಳೆ ನಿಯಂತ್ರಣ ಕಳೆದುಕೊಂಡು, ಉರುಳಿ ಬಿದ್ದಿತ್ತು. ಅದಾದ ಬಳಿಕ ವಿಮಾನ ನಿಲ್ದಾಣವು ನಾಲ್ಕು ದಿನಗಳವರೆಗೆ ಬಂದ್ ಆಗಿತ್ತು.

Leave a Reply

Your email address will not be published. Required fields are marked *

error: Content is protected !!