
ಉದಯವಾಹಿನಿ,ಶಿಡ್ಲಘಟ್ಟ: ಅಬ್ಲೂಡು ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಹಿಂದುಳಿದ ವರ್ಗ ಎ ಮಹಿಳಾ ಅಧ್ಯಕ್ಷೆ ಸ್ಥಾನಕ್ಕೆ ನಾಗವೇಣಿ ದೇವರಾಜ್,ಹಿಂದುಳಿದ ವರ್ಗ ಬಿ ಉಪಾಧ್ಯಕ್ಷ ಸ್ಥಾನಕ್ಕೆ ಕೆ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಲಾಗಿತ್ತು. ನಿಗದಿತ ಸಮಯದಲ್ಲಿ ಯಾರೂ ನಾಮ ಪತ್ರ ಸಲ್ಲಿಸದೇ ಇರುವುದರಿಂದ ನಾಗವೇಣಿ ದೇವರಾಜ್ ಅವರನ್ನು ಅಧ್ಯಕ್ಷರನ್ನಾಗಿ, ಕೆ ನಾರಾಯಣಸ್ವಾಮಿ ಅವರನ್ನ ಉಪಾಧ್ಯಕ್ಷರನ್ನಾಗಿ
ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿ ಮಂಜುಳ ಅವರು ತಿಳಿಸಿದರು.
ಅಬ್ಲೂಡು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷ ನಾಗವೇಣಿ ದೇವರಾಜ್, ಉಪಾಧ್ಯಕ್ಷರಾಗಿ ಕೆ ನಾರಾಯಣಸ್ವಾಮಿ ಹಾಗೂ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು.
ನೂತನ ಅಧ್ಯಕ್ಷೆ ನಾಗವೇಣಿ ದೇವರಾಜ್ ಮಾತನಾಡಿ ಅಬ್ಲೂಡು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಹೆಚ್ಚು ಶ್ರಮಿಸುತ್ತೇನೆ. ಸಾರ್ವಜನಿಕರಿಗೆ ಸರ್ಕಾರದಿಂದ ಬರುವ ಅನುಧಾನಗಳನ್ನು ಯಾವುದೇ ರೀತಿಯಲ್ಲೂ ದುರುಪಯೋಗವಾಗದಂತೆ ಕಾರ್ಯ ನಿರ್ವಹಿಸುತ್ತೇನೆ. ಈ ಕ್ಷೇತ್ರದ ಶಾಸಕ ಬಿಎನ್ ರವಿಕುಮಾರ್ ಅವರ ಬೆಂಬಲದಂದಿಗೆ, ಅವರ ಮಾರ್ಗದರ್ಶನದಲ್ಲಿ ಅಭಿವೃಧ್ದಿಯನ್ನು ಮಾಡುತ್ತೇವೆ ಎಂದರು.
ಉಪಾಧ್ಯಕ್ಷ ಕೆ ನಾರಾಯಣಸ್ವಾಮಿ ಮಾತನಾಡಿ ನಮ್ಮ ಗ್ರಾಮ ಪಂಚಾಯಿತಿಯ ನೈರ್ಮೈಲೀಕರಣ ಶುಚಿತ್ವ,ವಿದ್ಯತ್ ದೀಪಗಳು ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಹೊತ್ತು ನೀಡಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ ಎಂದು ತಿಳಿಸಿದರು.ನಂತರ ಶಾಸಕ ಬಿ ಎನ್ ರವಿಕುಮಾರ್ ಅವರ ನಿವಾಸದ ಕಛೇರಿಗೆ ತೆರಳಿ ಅವರಿಗೆ ಹೂವಿನ ಹಾರ ಹಾಕಿ ಸಿಹಿ ಹಂಚಿ ತಮ್ಮ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ವಿಚಾರಗಳ ಬಗ್ಗೆ ಎಲ್ಲಾ ಸದಸ್ಯರು ಮಾತನಾಡಿದರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ವೀಣಾ,ಕಾರ್ಯದರ್ಶಿ ರಮೇಶ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಸಿಕೆ ನಾರಾಯಣಸ್ವಾಮಿ,ಮಾಜಿ ಗ್ರಾ ಪಂ ಉಪಾಧ್ಯಕ್ಷ ಚಿಕ್ಕವೆಂಕಟರೆಡ್ಡಿ,ಮಾಜಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರುಗಳಾದ ಗೋಪಾಲ್, ಮುನಿವೆಂಕಟಸ್ವಾಮಿ, ಮಾಜಿ ಗ್ರಾ ಪಂ ಸದಸ್ಯ
ಕೆ ಆರ್ ರಮೇಶ್, ಮಾಜಿ ಗ್ರಾಮಪಂ ಅಧ್ಯಕ್ಷೆ ನಿರ್ಮಲ ಬೈರೇಗೌಡ,ಗ್ರಾ ಪಂ ಮಾಜಿ ಉಪಾಧ್ಯಕ್ಷ ಕೊಂಡಪ್ಪ,ಜೆಡಿಎಸ್ ಮುಖಂಡ ಶ್ರೀನಿವಾಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರು ಇದ್ದರು.
