ಉದಯವಾಹಿನಿ, ಬಾಲಿವುಡ್ ನಟಿ ಮೌನಿ ರಾಯ್ ತಮ್ಮ ಪತಿ ಸೂರಜ್ ನಂಬಿಯಾರ್ ಪರಸ್ಪರ ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ. ಈ ಸಡನ್ ಬದಲಾವಣೆಯಿಂದ ಈ ಜೋಡಿ ಬೇರಾಗುತ್ತಿದ್ದಾರೆಯೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಈ ವಿಷಯದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಯಾಗುತ್ತಿದೆ.
ಹಿಂದಿ ಭಾಷೆಯಲ್ಲಿ ನಾಗಿಣಿ ಧಾರಾವಾಹಿ ಮೂಲಕ ಖ್ಯಾತಿ ಪಡೆದು ಬಾಲಿವುಡ್ ರಂಗದಲ್ಲಿ ಮಿಂಚುತ್ತಿರುವ ನಟಿ ಮೌನಿ ರಾಯ್ ಭಾರತೀಯ ಸಿನಿಪ್ರೇಮಿಗಳಿಗೆ ಚಿರಪರಿಚಿತ. ಈ ಜೋಡಿ ಅಗಾಗ ಜೊತೆಗಿದ್ದ ಪೋಟೋ ಮತ್ತು ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಸುದ್ದಿಯಲ್ಲಿರುತ್ತಿದ್ದರು. ಆದರೆ ಈ ಜೋಡಿ ಈಗ ಜೊತೆಯಾಗಿಲ್ಲ, ಇವರ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂದು ಅಭಿಮಾನಿಗಳು ಮಾತನಾಡುತ್ತಿದ್ದಾರೆ.
ಅಷ್ಟಕ್ಕೂ ಈ ರೀತಿ ಫ್ಯಾನ್ಸ್ ಮಾತನಾಡೋದಕ್ಕೂ ಒಂದು ಕಾರಣ ಇದೆ. ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ ಪರಸ್ಪರ ಇನ್ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿದ್ದಾರೆ. ಆದರೆ ಈ ಜೋಡಿ ಜೊತೆಯಿದ್ದ ಹಳೆಯ ಫೋಟೋಗಳು ಹಾಗೆಯೇ ಇವೆ. ಏಕಾಏಕಿ ಮೌನಿ ಹೀಗೇಕೆ ಮಾಡಿದ್ದಾರೆ? ಇವರಿಬ್ಬರು ಡಿವೋರ್ಸ್ ತೆಗೆದುಕೊಳ್ಳುತ್ತಿದ್ದಾರಾ? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ

Leave a Reply

Your email address will not be published. Required fields are marked *

error: Content is protected !!