ಉದಯವಾಹಿನಿ, ತಮಿಳುನಾಡು ಸಿಎಂ ಆಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಟಿ ತ್ರಿಶಾ ಕೃಷ್ಣನ್ ಇದೀಗ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, The Love Is Always Louder ಎಂದು ಬರೆದುಕೊಂಡಿದ್ದಾರೆ. ನಟಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ವಿಜಯ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಧರಿಸಿದ್ದ ಸೀರೆಯಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಜೊತೆಗೆ The Love Is Always Louder ಎಂದು ಬರೆದುಕೊಂಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮಿಂಚಿದ್ದ ತ್ರಿಶಾ ಸಂಭ್ರಮ, ಸಡಗರ ಭಾರೀ ಕುತೂಹಲ ಕ್ರಿಯೇಟ್ ಮಾಡಿತ್ತು. ಇದೀಗ ಹಾಕಿದ ಪೋಸ್ಟ್ ಮತ್ತೆ ಹಲವು ಅರ್ಥಗಳನ್ನು ಹುಟ್ಟುಹಾಕಿದೆ.
ಪ್ರಮಾಣ ವಚನ ಸಮಾರಂಭದಲ್ಲಿ ವಿಜಯ್ ಪ್ರಮಾಣ ಸ್ವೀಕರಿಸುವಾಗ ಅಭಿಮಾನಿಗಳ ಚಪ್ಪಾಳೆ, ಶಿಳ್ಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೇ ಅರ್ಥದಲ್ಲಿ ವಿಜಯ್ ಮೇಲೆ ಅಭಿಮಾನಿಗಳಿಟ್ಟಿರುವ ಪ್ರೀತಿಯ ಬಗ್ಗೆ ತ್ರಿಶಾ ಬರೆದುಕೊಂಡು, ಪ್ರೀತಿ ಯಾವಾಗಲೂ ಜೋರಾಗಿ, ಅಬ್ಬರಿಸುತ್ತದೆ ಎಂದಿದ್ದಾರೆ ಎನ್ನಲಾಗಿದೆ.
