ಉದಯವಾಹಿನಿ, ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಗೈರಾಗಿದ್ದ ಬಗ್ಗೆ ಮುಂಬೈ ಇಂಡಿಯನ್ಸ್ ಮಾಹಿತಿ ನೀಡಿದೆ. ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಮಹೇಲ ಜಯವರ್ಧನೆ ಅವರು ಮಾಹಿತಿ ನೀಡಿದ್ದು, ನಾಯಕ ಹಾರ್ದಿಕ್ ಪಾಂಡ್ಯ ಅವರ ಗಾಯದ ಬಗ್ಗೆ ಅಪ್ಡೇಟ್ ಕೊಟ್ಟಿದ್ದಾರೆ. ಹಾರ್ದಿಕ್‌ಗೆ ಬೆನ್ನುನೋವಿನ ಸಮಸ್ಯೆ ಇದೆ. ಅದನ್ನು ಸರಿಪಡಿಸೋಕೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇನ್ನೂ ಗುಣಮುಖರಾಗಿಲ್ಲ. ಹೀಗಾಗಿ ಕಳೆದ ಕೆಲವು ದಿನಗಳಿಂದ ಅವರಿಗೆ ಪ್ರ್ಯಾಕ್ಟೀಸ್‌ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಸದ್ಯ ಹಾರ್ದಿಕ್ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್  ತಂಡವನ್ನು ಮುನ್ನಡೆಸುತ್ತಿದ್ದಾರೆ. ನಿನ್ನೆಯೇ ಪಂದ್ಯದಲ್ಲಿ ಮುಂಬೈ ತಂಡ ಆರ್‌ಸಿಬಿ (RCB) ವಿರುದ್ಧ ಎರಡು ವಿಕೆಟ್‌ಗಳಿಂದ ಸೋಲನುಭವಿಸಿದೆ. ಈ ಸೋಲು ಪ್ಲೇಆಫ್ ರೇಸ್‌ನಿಂದ ಹೊರಗುಳಿಯುವಂತೆ ಮಾಡಿದೆ. ಲಕ್ನೋ ಸೂಪರ್ ಜೈಂಟ್ಸ್ ನಂತರ ಪಂದ್ಯಾವಳಿಯಿಂದ ಹೊರಗುಳಿದ ಎರಡನೇ ತಂಡವಾಗಿ ಮುಂಬೈ ಹೊರಹೊಮ್ಮಿದೆ.

 

Leave a Reply

Your email address will not be published. Required fields are marked *

error: Content is protected !!