ಉದಯವಾಹಿನಿ, ರಾಯಚೂರು: ಕಲಿಯುಗದ ಕಾಮಧೇನು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಏಪ್ರಿಲ್ ಹಾಗೂ ಮೇ ತಿಂಗಳಿನ 20 ದಿನಗಳ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 2.78 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಏಪ್ರಿಲ್ ಹಾಗೂ ಮೇ ತಿಂಗಳಿನ 20 ದಿನಗಳಲ್ಲಿ ಕೋಟ್ಯಾಂತರ ರೂಪಾಯಿ ಕಾಣಿಕೆ ಹರಿದು ಬಂದಿದೆ. ಒಟ್ಟು 2,78,19,526 ರೂ. ಕಾಣಿಕೆ ಹರಿದು ಬಂದಿದ್ದು, ಇದರಲ್ಲಿ 2,69,28,176 ರೂ. ಕರೆನ್ಸಿ ನೋಟುಗಳು. 8,91,350 ರೂ. ನಾಣ್ಯಗಳು ಸಂಗ್ರಹವಾಗಿವೆ. 15.100 ಗ್ರಾಂ ಚಿನ್ನ, 751 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ.
ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಸೋಮವಾರ (ಮೇ 11) ರಾತ್ರಿ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ ಭಕ್ತರು, ಕರ ಸೇವಕರು ಭಾಗವಹಿಸಿದ್ದರು.

 

Leave a Reply

Your email address will not be published. Required fields are marked *

error: Content is protected !!