ಉದಯವಾಹಿನಿ, ಅಹಮದಾಬಾದ್: ಗುಜರಾತ್ ವಿರುದ್ಧ ಆಲೌಟ್ ಆಗಿ ಸನ್‌ರೈಸರ್ಸ್ ಹೈದರಾಬಾದ್ ಹೀನಾಯವಾಗಿ ಸೋಲುಂಡಿದೆ. ನಾಯಕ ಪ್ಯಾಟ್ ಕಮ್ಮಿನ್ಸ್‌ಗೆ ಬಿಸಿಸಿಐ ಶಾಕ್ ನೀಡಿದ್ದು, 12 ಲಕ್ಷ ರೂ. ದಂಡ ವಿಧಿಸಿದೆ. ಬುಧವಾರ ಗುಜರಾತ್ ಜೆಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನಿಧಾನಗತಿಯ ಓವರ್ ಕಾಯ್ದುಕೊಂಡಿದ್ದಕ್ಕಾಗಿ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22ರ ಅಡಿಯಲ್ಲಿ ಕನಿಷ್ಠ ಓವರ್ ರೇಟ್‌ಗೆ ಸಂಬಂಧಿಸಿದ್ದು, ಈ ಸೀಸನ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ಮೊದಲ ಬಾರಿ ನೀತಿ ಉಲ್ಲಂಘಿಸಿದ್ದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
