ಉದಯವಾಹಿನಿ, ಉಡುಪಿ: ಹಿಜಾಬ್ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ. ಈ ಕುರಿತು ಹಿಂದೂ ಮುಖಂಡ ಸುನೀಲ್ ಕೆ.ಆರ್ ಮಾತನಾಡಿ, ಸರ್ಕಾರ ಇಸ್ಲಾಮಿಕರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ಓಲೈಕೆಯೆ ಬಹು ಮುಖ್ಯವಾದಂತಿದೆ. ಮೂಲಭೂತವಾದಿ ಸಂಘಟನೆಗಳ ಜೊತೆಗೆ ರಾಜ್ಯ ಸರ್ಕಾರ ನಿಂತಿದೆ ಎಂದು ಕಿಡಿಕಾರಿದ್ದಾರೆ. ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಈ ನಿರ್ಧಾರದ ಹಿಂದೆ ಬಹಳ ದೊಡ್ಡ ಷಡ್ಯಂತ್ರವಿದೆ. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!