ಉದಯವಾಹಿನಿ ಕುಶಲನಗರ :-ಜಿಲ್ಲೆಯಲ್ಲಿ ಕಳೆದ ಏಳು ತಿಂಗಳಲ್ಲಿ ಗಾಂಜಾ ಸಂಬ0ಧಿಸಿದ0ತೆ ೬೧ ಪ್ರಕರಣಗಳು ದಾಖಲಾಗಿದ್ದು, ೧೫೭ ಜನರ ಮೇಲೆ ಮೊಕದ್ದಮೆ ಹೂಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಪೊಲೀಸ್ ಇಲಾಖೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ ಮಂಗಳವಾರ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ೩೬ ಕೆ.ಜಿ.ಯಷ್ಟು ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸುಮಾರು ೬ ಕಡೆಗಳಲ್ಲಿ ಗಾಂಜಾ ಬೆಳೆಯುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ. ಹಾಗೆಯೇ ೯೯ ಗ್ರಾಂ ಎಂಡಿಎ0ಎ(ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ್) ಮತ್ತು ೯ ಬ್ಲಾಕ್‌ಗಳಲ್ಲಿ ಸ್ಟಿçಪ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಯುವಜನರು ಮದ್ಯ ಅಥವಾ ಮಾದಕ ವಸ್ತುಗಳಿಗೆ ತುತ್ತಾಗದೆ ವಿದ್ಯಾರ್ಜನೆಯತ್ತ ಗಮನಹರಿಸಬೇಕು. ಲಭ್ಯವಿರುವ ಸಮಯವನ್ನು ಸರಿಯಾಗಿ ಬಳಸಿಕೊಂಡಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಲಹೆ ಮಾಡಿದರು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಿ, ಉದ್ಯೋಗ ಪಡೆಯುವತ್ತ ಗಮನಹರಿಸಬೇಕು. ಸಂಗೀತ, ಸಾಹಿತ್ಯ, ಕ್ರೀಡೆ ಹೀಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ ಎಂದರು.ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ ಅವರು ಮಾತನಾಡಿ ವಿದ್ಯಾರ್ಥಿಗಳು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗಬಾರದು. ಇತರರು ಬಲಿಯಾಗದಂತೆ ಎಚ್ಚರವಹಿಸುವುದು ಅತ್ಯಗತ್ಯ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಅವರು ಮಾತನಾಡಿ ಡಾ.ಮಹಾಂತ ಶಿವಯೋಗಿಗಳ ಸಮಾಜ ಕಾರ್ಯ ಸ್ಮರಣೀಯ. ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಮಹಾಂತ ಸ್ವಾಮೀಜಿಗಳು ಶ್ರಮಿಸಿದ್ದಾರೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು. ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರಾದ ಸ್ಮಿತಾ ಸುಬ್ಬಯ್ಯ, ಉಪನ್ಯಾಸಕರಾದ ಚಿದಾನಂದ, ರಾಜಸುಂದರA, ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!