ಉದಯವಾಹಿನಿ ಕುಶಾಲನಗರ :ಇದೇ ಆಗಸ್ಟ್, 15 ರಂದು ಸಂಭ್ರಮ ಮತ್ತು ಸಡಗರದೊಂದಿಗೆ ಅರ್ಥಪೂರ್ಣವಾಗಿ ಸ್ವಾತಂತ್ರö್ಯ ದಿನಾಚರಣೆ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಳೆದ ಬಾರಿಯಂತೆ ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರö್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಯಿತು.
ಸ್ವಾಗತ, ಧ್ವಜಾರೋಹಣ, ವೇದಿಕೆ, ಕವಾಯತು, ಉಪಾಹಾರ, ಭಾಷಣ, ಬಹುಮಾನ ಹೀಗೆ ವಿವಿಧ ಉಪ ಸಮಿತಿಗಳು ಕಳೆದ ಬಾರಿಯಂತೆ ತಮ್ಮ ಕೆಲಸಗಳನ್ನು ಚಾಚುತಪ್ಪದೆ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು. ಸ್ವಾಗತ ಸಮಿತಿಯವರು ಶಿಷ್ಟಾಚಾರದಂತೆ ಆಹ್ವಾನ ಪತ್ರ ತಲುಪಿಸುವುದು ಮತ್ತಿತರ ಕಾರ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವನ್ನು ಗೌರವಿಸುವುದು, ಸ್ವಾತಂತ್ರö್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ಎಲ್ಲಾ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಳೆಗಾಲ ಆಗಿರುವುದರಿಂದ ಪ್ರತಿ ವರ್ಷ ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರö್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಡಿವೈಎಸ್‌ಪಿ ಜಗದೀಶ್ ಅವರು ಮಾತನಾಡಿ ಕವಾಯತು ಸಂಬAಧಿಸಿದAತೆ ಪೊಲೀಸ್, ಎನ್‌ಸಿಸಿ, ಅರಣ್ಯ, ಗೃಹರಕ್ಷಕ ದಳ ಹೀಗೆ ವಿವಿಧ ಕವಾಯತುಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಅವರು ೧೪ ಶಾಲೆಗಳ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಸ್ವಾತಂತ್ರö್ಯ ದಿನಾಚರಣೆಗೂ ಮೊದಲು ರಿಹರ್ಸಲ್ ನಡೆಯಲಿದ್ದು, ಆ ಸಂದರ್ಭದಲ್ಲಿ ಕುಡಿಯುವ ನೀರು ವ್ಯವಸ್ಥೆ ಮಾಡಬೇಕಿದೆ ಎಂದು ಕೋರಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಕ್ ಅವರು ಕೃಷಿ ಸಾಧಕರಿಗೆ ಸನ್ಮಾನಿಸಬಹುದು ಎಂದು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸ್ವಾತಂತ್ರö್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸಬೇಕು ಎಂದು ಸಲಹೆ ಮಾಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!