
ಉದಯವಾಹಿನಿ, ಜೈಪುರ, : ಹರಿಯಾಣದಲ್ಲಿನ ಹಿಂಸಾಚಾರವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಗಮನವನ್ನು ಬೇರೆಡೆ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹರಿಹಾಯ್ದಿದ್ದಾರೆ. ಜುನೈದ್ ಮತ್ತು ನಾಸಿರ್ ಹತ್ಯೆಯ ಶಂಕಿತರನ್ನು ಬಂಧಿಸಲು ಪೊಲೀಸ್ ತಂಡ ಹರಿಯಾಣದ ನುಹ್ ಜಿಲ್ಲೆಗೆ ತೆರಳಿದಾಗ ರಾಜಸ್ಥಾನ ಪೊಲೀಸ್ ತಂಡದ ವಿರುದ್ಧ ಪ್ರಥಮ ಮಾಹಿತಿ ವರದಿ ದಾಖಲಿಸಲಾಗಿದೆ ಎಂದು ತನಿಖೆಗೆ ಸಹಕಾರ ನೀಡಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಆರೋಪಿಗಳು ಸೋದರ ಸಂಬಂಧಿಗಳಾಗಿದ್ದು, ಫೆಬ್ರವರಿ 16 ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದಲ್ಲಿ ಪತ್ತೆಯಾಗಿದ್ದಾರೆ. ಮೃತರ ಕುಟುಂಬಗಳು ಅವರನ್ನು ಬಜರಂಗದಳದ ಸದಸ್ಯರು ಅಪಹರಿಸಿ, ಹೊಡೆದು ಮತ್ತು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ ಎನ್ನುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಭಜರಂಗದಳದ ಸದಸ್ಯ ಮೋನು ಮಾನೇಸರ್ ಅವರನ್ನು ಬಂಧಿಸಲು ರಾಜಸ್ಥಾನ ಪೊಲೀಸರು ಸ್ವತಂತ್ರರು ಎಂಬ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ದ್ವಂದ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.
