
ಉದಯವಾಹಿನಿ ದೇವರಹಿಪ್ಪರಗಿ: ಆರೋಗ್ಯ ಮತ್ತು ಸ್ವಚ್ಚತೆ, ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಬಳಕೆ ಹಾಗೂ ಪೌಷ್ಟಿಕ ಆಹಾರ ಸೇವನೆ ಸೇರಿದಂತೆ ಸ್ವಚ್ಛತೆ ಆರೋಗ್ಯ ಅರಿವು ಮೂಡಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಳ್ಳೆಯ ಕಾರ್ಯ ಮಾಡೋಣ ಎಂದು ಸಮುದಾಯ ಅಧಿಕಾರಿಗಳಾದ ಶ್ರೀಮತಿ ಎಸ್ ಡಿ ವಿಜಿ ಹೇಳಿದರು.ತಾಲೂಕಿನ ಜಾಲವಾದ ಗ್ರಾಮದ ಅಂಗನವಾಡಿ ಕೇಂದ್ರ-4ರಲ್ಲಿ ಶುಕ್ರವಾರದಂದು ಆರೋಗ್ಯ ಮತ್ತು ನೈರ್ಮಲ್ಯ ಅರಿವು ಹಾಗೂ ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದ ಪ್ರತಿಯೊಬ್ಬರಿಗೂ ಶಾರೀರಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಹಾಗೂ ಗ್ರಾಮೀಣ ಪ್ರದೇಶದ ಜನರಲ್ಲಿ ಆರೋಗ್ಯ ಹಾಗೂ ನೈರ್ಮಲ್ಯ ಬಗ್ಗೆ ಅರಿವು ಮೂಡಿಸುವಲ್ಲಿ ಕೆಲಸ ಮಾಡೋಣ ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆ ಭಾಗ್ಯಜ್ಯೋತಿ ಮಣೂರ ಮಾತನಾಡಿ ಪೌಷ್ಟಿಕ ಆಹಾರ ಬಳಕೆ, ಆರೋಗ್ಯ, ಸ್ವಚ್ಛತೆ ಬಗ್ಗೆ ಅರಿವು ಮೂಡಿ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಕ್ಕಳ ತಾಯಂದಿರು, ಗರ್ಭಿಣಿಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
