ಉದಯವಾಹಿನಿ ಕುಶಾಲ ನಗರ:- ಕುಶಾಲನಗರ ತಾಲೂಕಿನ ಶಿರಂಗಾಲ ಗ್ರಾಮ ಪಂಚಾಯಿತಿಗೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಲತಾಬಾಯಿ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಎಚ್ಎಸ್ ಬಸವರಾಜ್ ರವರು ಅವಿರೋಧವಾಗಿ ಆಯ್ಕೆಯಾದರು. ಪರಿಶಿಷ್ಟ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಲತಾ ಬಾಯಿ ಹಾಗೂ ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಎಚ್ಎಸ್ ಬಸವರಾಜು ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ವಾಗಿ ಆಯ್ಕೆಯಾದರೂ ತಹಶೀಲ್ದಾರ್ ಟಿಎಂ ಪ್ರಕಾಶ್ ಚುನಾವಣಾ ಪ್ರಕ್ರಿಯೆ ನಡೆಸಿದರು ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಕಾಂತ್. ಸರಿತಾ. ಗೀತಾ. ಪ್ರದೀಪ್. ಭಾಗೀರಥಿ ಧರ್ಮಪ್ಪ ಅಭಿವೃದ್ಧಿ ಅಧಿಕಾರಿ ಹೇಮಲತಾ ಕಂದಾಯ ಇಲಾಖೆ ಸಿಬ್ಬಂದಿಗಳಾದ ಸಂತೋಷ ಲೋಹಿತ್ ಮತ್ತು ಚೇತನ್ ಇದ್ದರು
