ಉದಯವಾಹಿನಿ ತಾಳಿಕೋಟಿ: ತಾಲೂಕಿನ ಕೊಣ್ಣೂರ ಗ್ರಾ.ಪಂ ಎರಡನೇಯ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ರೇಣುಕಾ ಮಾದರ ಹಾಗೂ ಉಪಾಧ್ಯಕ್ಷರಾಗಿ ಸಾಹೇಬಲಾಲ ಟಕ್ಕಳಗಿ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಸ್ಥಾನ ಪರಿಶಿಷ್ಠ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ನಿಗಧಿಯಾಗಿತ್ತು, ಗ್ರಾ.ಪಂನ ಒಟ್ಟು ೧೬ಜನ ಸದಸ್ಯರಲ್ಲಿ ೧೨ ಜನ ಚುನಾವಣಾ ಪ್ರಕ್ರೀಯೆಯಲ್ಲಿ ಭಾಗವಹಿಸಿದ್ದರು ಇವರಿಬ್ಬರ ಹೊರತಾಗಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾದ ಸುರೇಶ ಬಾವಿಕಟ್ಟಿಯವರು ಇವರಿಬ್ಬರು ಅವಿರೊಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು ಸಹಾಯಕ ಚುನಾವಣಾಧಿಕಾರಿಯಾಗಿ ಎಸ್. ಆರ್ ಕಟ್ಟಿಮನಿ, ಆರ್ ಜಿ. ರುದ್ರವಾಡಿ, ಆರ್ ವಾಯ್ ಸಾಗರ, ಹಾಗೂ ಪಿಡಿಓ ಅನೀಲ ಕಿರಣಗಿ ಕಾರ್ಯ ನಿರ್ವಹಿಸಿದರು.
ನೂತನ ಅಧ್ಯಕ್ಷ ಉಪಾಧುಕ್ಷರನ್ನು ಸನ್ಮಾನಿಸಿ ಮಾತನಾಡಿದ ಮುಖಂಡ ಡಾ. ಬಸವರಾಜ ಅಸ್ಕಿ ಅವರು ಎಲ್ಲ ಸದಸ್ಯರು ಪಕ್ಷಾತೀತವಾಗಿ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳ ಮೂಲ ಸೌಕರ್ಯ ಹಾಗೂ ಅಭಿವೃದ್ಧಿಗೆ ಶ್ರಮಿಸಬೇಕು ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದಿಸುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿ ಎಂದರು.
ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ. ಬಿ. ಅಸ್ಕಿ ಮಾತನಾಡಿ ಎಲ್ಲರೂ ಒಂದಾಗಿ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆಮಾಡಿದ್ದಕ್ಕೆ ಅಭಿನಂದಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಹಾಗೂ ಕ್ಷೇತ್ರದಲ್ಲಿ ಸಿ. ಎಸ್. ನಾಡಗೌಡರು ಶಾಸಕರಾಗಿರುವುದರಿಂದ ಅವರ ಮೂಲಕ ಹೆಚ್ಚಿನ ಅನುಧಾನವನ್ನು ತಂದು ಕೆಲಸ ಮಾಡಲು ಪ್ರಯತ್ನಿಸಬೇಕು ಎಂದರು.
ಈ ಸಮಯದಲ್ಲಿ ಗ್ರಾಮದ ಗಣ್ಯರು, ವಬಿವಿಧ ಪಕ್ಷದ ಮುಖಂಡರು ಹಾಗೂ ಹಿರಿಯರು ಉಪಸ್ಥಿತರಿದ್ದರು.
