
ಉದಯವಾಹಿನಿ ಮುದಗಲ್ಲ :ರಾಜ್ಯ ಸರ್ಕಾರದ ಆದೇಶದಂತೆ ಅಂತ್ಯೋ ದಯ (ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚು ಸದಸ್ಯರು ) ಹಾಗೂ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ 5 ಕೆ.ಜಿ ಆಹಾರಧಾನ್ಯವನ್ನು ಸೇರಿಸಿ ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆಜಿ ಆಹಾರಧಾನ್ಯ ಉಚಿತ ವಾಗಿ ವಿತರಿಸಲು ಸರ್ಕಾರ ನಿರ್ಧರಿಸಿದ್ದು,
ಯೋಜನೆ ಹಾಗೂ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯದಬದಲಾಗಿ ಪ್ರತಿ ಕೆ.ಜಿಗೆ ರೂ. 34/-ರಂತೆ ಪಡಿತರ ಚೀಟಿದಾರರ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಹಣವನ್ನು ವರ್ಗಾಯಿಸಬೇಕಾಗಿರುತ್ತದೆ.ಪಡಿತರ ಚೀಟಿಯಲ್ಲಿ ಕಡ್ಡಾಯವಾಗಿ ಕುಟುಂಬದ ಮುಖ್ಯಸ್ಥರು ನಮೂದಾಗಿ ರಬೇಕು ಕುಟುಂಬದ ಮುಖ್ಯಸ್ಥರು ನಿಧನ ಹೊಂದಿದ್ದಲ್ಲಿ, ಇಂದು ಮುದಗಲ್ಲ ಪುರಸಭೆ ರಂಗಮಂದಿರದಲ್ಲಿ ಆಯೋಜನೆ ಮಾಡಲಾಗಿದೆ. ಭೇಟಿ ನೀಡಿ, ಮೃತರ ಹೆಸರನ್ನು ಪಡಿತರ ಚೀಟಿಯಿಂದ ತೆಗೆದು ಹಾಕಿ, ಇ-ಕೆವೈಸಿ ಮೂಲಕ ಕುಟುಂಬದ ಮುಖ್ಯಸ್ಥರನ್ನು ನಮೂದು ಮಾಡಿ ಕೊಳ್ಳಬೇಕು. ಒಂದಕ್ಕಿಂತ ಹೆಚ್ಚು ಕುಟುಂಬದ ಮುಖ್ಯಸ್ಥರು ನಮೂದಾಗಿದ್ದಲ್ಲಿ ಅಂತಹವರಿಗೆ ನಗದು ವರ್ಗಾವಣೆಗೆ ಅವಕಾಶ ವಿರುವುದಿಲ್ಲ.ಪಡಿತರ ಚೀಟಿದಾರರು ನೇರ ನಗದು ವರ್ಗಾವಣೆ ಪ್ರಯೋಜನ ಪಡೆಯಲು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಪಡಿತರ ಚೀಟಿದಾರರಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ವತಿಯಿಂದ ಬ್ಯಾಂಕ್ ಖಾತೆ ತೆರೆಯುವ ಸಂಬಂಧ ಕ್ರಮವಹಿಸಲಿದ್ದು, ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ ಸಿಬ್ಬಂದಿಗಳು ಶಿಬಿರವನ್ನು ನಡೆಸಿ ಸದ್ರಿ ಫಲಾನುಭವಿ ಗಳಿಗೆ ಆ ಕೂಡಲೇ ಬ್ಯಾಂಕ್ ಅಕೌಂಟ್ ತೆರೆದು ನೀಡುವರು ಈ ಸಂಬಂಧ ಸದ್ರಿ ಪಡಿತರ ಚೀಟಿಯ ಕುಟುಂಬದ ಮುಖ್ಯಸ್ಥರು ಓಟಿಪಿ ಸ್ವೀಕರಿಸಬೇಕಾದ ಮೊಬೈಲ್, ಆಧಾರ್ ಕಾರ್ಡ್ ಪ್ರತಿ, ತರಬೇಕು ಎಂದು ಲಿಂಗಸೂರು ನ ಅಹಾರ ಶಿರಸ್ತೇ ಅಧಿಕಾರಿ ಯಾದ ಮಹಾಲಕ್ಷ್ಮಿ ಹಾಗೂ ಹಾಗೂ ರಾಮಕೃಷ್ಣ ಅಹಾರ ನಿರೀಕ್ಷಕರು ಅಧಿಕಾರಿ ಲಿಂಗಸೂರು, ಅವರು ಮುದಗಲ್ಲ ಪುರಸಭೆ ರಂಗ ಮಂದಿರದಲ್ಲಿ ಆಯೋಜನೆ ಮಾಡಲಾಗಿದೆ ಇ ಶಿಬಿರ ನಿಯೋಜನೆ ಇಂದ ಮುದಗಲ್ಲ ಸಾವ೯ಜನಿಕರು ಇದರ ಸೌಲಭ್ಯ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು
.ಈ ಸಂದರ್ಭದಲ್ಲಿ
ಅಂಚೆ ಕಚೇರಿ ಸಿಬ್ಬಂದಿ ಯಾದ ಸುರೇಶ್ ಹಾಗೂ ಶ್ರೀಮಾತ ಹಾಗೂ ಮುದಗಲ್ಲ ಪಡಿತರ ವಿತರಣಾ ಅಂಗಡಿಯ ಮಾಲಕರು ಕಂಪ್ಯೂಟರ್ ಆಪರೇಟರ್ಗಳು ಶಿಬಿರ ದ ಬಗ್ಗೆ ಜನರಿಗೆ ಮಾಹಿತಿ ನೀಡಿದರು.
