ಉದಯವಾಹಿನಿ, ದೆಹಲಿ : ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಜಮ್ಮು ಕಾಶ್ಮೀರದ ವಿಷಯ ಪ್ರಸ್ತಾಪ ಮಾಡಿದ ಪಾಕಿಸ್ತಾನಕ್ಕೆ ಭಾರತ ಸೂಕ್ತ ರೀತಿಯಲ್ಲಿ ತಿರುಗೇಟು ನೀಡಿದೆ. ಭಾರತದ ಆಂತರಿಕ ವಿಷಯಗಳಲ್ಲಿ ಪಾಕಿಸ್ತಾನ ಮೂಗು ತೂರಸದೆ ಇರುವುದು ಒಳಿತು ಎಚ್ಚರಿಕೆ ಸಂದೇಶ ರವಾನಿಸಿದೆ.ವಿಶ್ವಸಂಸ್ಥೆಯಲ್ಲಿನ ಭಾರತದ ಮಿಷನ್‍ನ ಸಲಹೆಗಾರರಾದ ಆರ್ ಮಧು ಸೂದನ್ ಪ್ರತಿಕ್ರಿಯೆ ನೀಡಿ, ಭಯೋತ್ಪಾದಕರಿಗೆ ಆಶ್ರಯ ನೀಡುವ ದೇಶದೊಂದಿಗೆ ಗುರುತಿಸಿಕೊಳ್ಳುವ ಅಗತ್ಯವಿಲ್ಲ ಎಂದು ನೇರವಾಗಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ. ನಿಮ್ಮ ದೇಶದ ಸ್ವಂತ ವಿಷಯಗಳ ಬಗ್ಗೆ ಗಮನ ಹರಿಸಿ ಭಾರತದ ವಿಷಯಗಳ ಬಗ್ಗೆ ನಿಮಗೆ ಕಾಳಜಿ ಬೇಡ. ನಿಮ್ಮ ಸಮಸ್ಯೆಯನ್ನು ನೀವು ಸರಿ ಪಡಿಸಿಕೊಳ್ಳಿ ಎಂದಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ಸಮಸ್ಯೆ ಪ್ರಸ್ತಾಪ ಮಾಡುವ ಬದಲು ತನ್ನ ಆಂತರಿಕ ವ್ಯವಹಾರಗಳ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ಮತ್ತು ತಮ್ಮದೇ ಆದ ಗಡಿಗಳನ್ನು ಪುನಃಸ್ಥಾಪಿಸಿ ಎಂದು ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ.
