ಉದಯವಾಹಿನಿ, ಪಾಕಿಸ್ತಾನ : ಕರಾಚಿಯಿಂದ 275 ಕಿಲೋಮೀಟರ್ ದೂರದಲ್ಲಿರುವ ನಿಲ್ದಾಣದ ಬಳಿ ರಾವಲ್ಪಿಂಡಿಗೆ ತೆರಳುತ್ತಿದ್ದ ಹಜಾರಾ ಎಕ್ಸ್ಪ್ರೆಸ್ನ ಒಟ್ಟು ಹತ್ತು ರೈಲು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಾಕಿಸ್ತಾನದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಸುದ್ದಿ ಚಾನೆಲ್ ಜಿಯೋ ನ್ಯೂಸ್ ತಿಳಿಸಿದೆ. ಗಾಯಗೊಂಡ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರೈಲು ಹಳಿ ತಪ್ಪಲು ಕಾರಣ ಇನ್ನೂ ತಿಳಿದುಬಂದಿಲ್ಲ. ಈ ವಿಷಯ ತಿಳಿದು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಯ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.
ಅಪಘಾತದ ಸ್ಥಳಕ್ಕೆ ಪರಿಹಾರ ರೈಲು ಹೊರಟಿದೆ ಮತ್ತು ಅದು ಶೀಘ್ರದಲ್ಲೇ ಬರಲಿದೆ ಎಂದು ಸ್ಥಳೀಯ ಆಡಳಿತಾಧಿಕಾರಿ ತಿಳಿಸಿದ್ದಾರೆ.
ಅಪಘಾತದಿಂದಾಗಿ, ಯುಪಿ ಟ್ರ್ಯಾಕ್ನಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ವಿಭಾಗೀಯ ಅಧೀಕ್ಷಕ ಸುಕ್ಕೂರ್ ಮಹಮೂದುರ್ ರಹಮಾನ್ ಜಿಯೋ ನ್ಯೂಸ್ಗೆ ತಿಳಿಸಿದ್ದಾರೆ.
ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಬಹುದು ಎನ್ನಲಾಗುತ್ತಿದೆ. ಈ ಪಾಕಿಸ್ತಾನದಲ್ಲಿನ ಪ್ಯಾಸೆಂಜರ್ ರೈಲು ಹಳಿ ತಪ್ಪಿ ಉಂಟಾಗಿರುವಂತ ದುರಂತದ ಬಗ್ಗೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!