ಉದಯವಾಹಿನಿ ರಾಮನಗರ :- ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಕ್ರೀಡಾಸಕ್ತಿ ಬೆಳೆಸಿಕೊಳ್ಳುವುದರೊಂದಿಗೆ ಜೀವನದಲ್ಲಿ ಸ್ಪಷ್ಟ ಗುರಿ ಹೊಂದಿರಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಶಾರೀರಕ ಹಾಗೂ ಭೌತಿಕ ಬೆಳವಣಿಗೆಯಾಗುತ್ತದೆ. ಉತ್ತಮ ಆರೋಗ್ಯ ಸಿಗುತ್ತದೆ. ಕ್ರೀಡೆಯಲ್ಲಿ ಸೋಲು ಗೆಲುವಿನ ಬಗ್ಗೆ ಗಮನ ಹರಿಸದೇ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಸ್ಪರ್ದಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸುವರ್ಣಮುಖಿ ಶಾಲೆಯ ಮುಖ್ಯಶಿಕ್ಷಕರಾದ ಚಂದ್ರಶೇಖರ್ ರವರು ತಿಳಿಸಿದ್ದಾರೆ.
2023-2024ನೇ ಸಾಲಿನ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸುವರ್ಣಮುಖಿ ಶಾಲೆಯ ಮಕ್ಕಳು ಉತ್ತಮ ಸಾಧನೆಗೈದಿದ್ದು, ಶಾಲೆಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕನಕಪುರ ತಾಲೂಕಿನ ವಡೆರಹಳ್ಳಿ ಗ್ರಾಮದ ಸುವರ್ಣಮುಖಿ ಶಾಲೆಯ ಮಕ್ಕಳು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಸ್ಫರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.ಮುಖ್ಯವಾಗಿ ಕ್ರೀಡಾಕೂಟದಲ್ಲಿ ನಮ್ಮ ಸುವರ್ಣಮುಖಿ ಶಾಲೆಯ ವಿದ್ಯಾರ್ಥಿಗಳು 200ಮೀ ಓಟ – ಪ್ರಥಮ ಹಾಗೂ ದ್ವಿತೀಯ ಸ್ಥಾನ, 400ಮೀ ರನ್ನಿಂಗ್ ರಿಲೇ – ಪ್ರಥಮ ಸ್ಥಾನ, 600ಮೀ ಓಟ -ದ್ವಿತೀಯ ಸ್ಥಾನ, ಎತ್ತರ ಜಿಗಿತ – ಪ್ರಥಮ ಸ್ಥಾನ, ಉದ್ದ ಜಿಗಿತ – ಪ್ರಥಮ ಸ್ಥಾನ, ಚಕ್ರ ಎಸೆತ – ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜೊತೆಗೆ ಗುಂಡು ಎಸೆತ – ತೃತೀಯ ಸ್ಥಾನ, 100ಮೀ ಓಟ – ತೃತೀಯ ಸ್ಥಾನ, ಚಕ್ರ ಎಸೆತ – ತೃತೀಯ ಸ್ಥಾನ ಈ ರೀತಿಯಾಗಿ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಚಂದ್ರಶೇಖರ್, ದೈಹಿಕ ಶಿಕ್ಷಣ ಶಿಕ್ಷಕರಾದ ಹನುಮಂತಪ್ಪ.ವೈ, ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!