
ಉದಯವಾಹಿನಿ ದೇವರಹಿಪ್ಪರಗಿ: ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು. ಪಟ್ಟಣದಲ್ಲಿ ರವಿವಾರದಂದು ಎಸ್ ಬಿ ಮಲ್ಟಿ ಸ್ಪೆಷಾಲಿಟಿ ಆಯುರ್ವೇದ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ಯುಗದಲ್ಲಿ ಪ್ರತಿಯೊಬ್ಬರು ದೈನಂದಿನ ಕೆಲಸದ ಒತ್ತಡದಲ್ಲಿದ್ದು, ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನಹರಿಸಲು ಸಾಧ್ಯವಾಗುತ್ತಿಲ್ಲ .ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ಕುಗ್ಗಿ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಗಳಿದ್ದು, ಪ್ರತಿಯೊಬ್ಬರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು, ಆಸ್ಪತ್ರೆಗಳು ರೋಗಿಗಳ ಪಾಲಿಗೆ ಹಣ ಸುಲಿಗೆ ಮಾಡದೆ ಉತ್ತಮ ಸೇವೆ ನೀಡಿ ಸ್ಪಂದಿಸಬೇಕು ಹಾಗೂ ಉತ್ತಮ ಆರೋಗ್ಯಕ್ಕೆ ಆಯುರ್ವೇದ ಮದ್ದಾಗಿದ್ದು, ಆಯುಷ್ ಆಸ್ಪತ್ರೆಯ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಹೇಳಿದರು. ನಂತರ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರಿಗೆ ಡಾ ಅಜೀತ ಪವಾರ ಹಾಗೂ ಡಾ ಸತೀಶ್ ರಾಠೋಡ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಪಕ್ಷದ ಉಪಾಧ್ಯಕ್ಷರಾದ ರಿಯಾಜ್ ಯಲಗಾರ, ಜೆಡಿಎಸ್ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾದ ವೀರೇಶ ಕುದುರಿ,ಮುಖಂಡರುಗಳಾದ ಸುಭಾಸ್ ರಾಠೋಡ, ಸುರೇಶ ರಾಠೋಡ ಸುಭಾಸ್ ಜಾಧವ, ಬಸಯ್ಯ ಮಲ್ಲಿಕಾರ್ಜುನ ಮಠ ಸೇರಿದಂತೆ ಪಟ್ಟಣದ ಪ್ರಮುಖರು ಗಣ್ಯರು ವೈದ್ಯರು ಹಾಗೂ ಇತರರು ಉಪಸ್ಥಿತರಿದ್ದರು.
