ಉದಯವಾಹಿನಿ, ದೋಡಾ: ಆರ್ಟಿಕಲ್ ೩೭೦ ರದ್ದತಿಯನ್ನು ವಿರೋಧ ಮಾಡುವವರಿಗೆ ಕೇಂದ್ರಾಡಳಿತ ಪ್ರದೇಶದ ಇತಿಹಾಸ ಮತ್ತು ಭೌಗೋಳಿಕತೆಯ ಅರಿವಿಲ್ಲ.ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪ್ರಜಾಸತ್ತಾತ್ಮಕ ಪ್ರಗತಿಪರ ಆಜಾದ್ ಪಕ್ಷದ ಮುಖ್ಯಸ್ಥ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಆರ್ಟಿಕಲ್ ೩೭೦ ರದ್ದತಿ ಕುರಿತು ಮಾತನಾಡಿದ ಅವರು, ಆರ್ಟಿಕಲ್ ೩೭೦ ಯಾವುದೇ ನಿರ್ದಿಷ್ಟ ಪ್ರದೇಶ, ಪ್ರಾಂತ್ಯ ಅಥವಾ ಧರ್ಮಕ್ಕೆ ಸೀಮಿತವಲ್ಲ. ಎಲ್ಲರಿಗೂ ಸಮಾನವಾಗಿರಲಿದೆ. ನನಗೆ ಸುಪ್ರೀಂ ಕೋರ್ಟ್ ಮೇಲೆ ಸಂಪೂರ್ಣ ನಂಬಿಕೆಯಿದೆ. ಆರ್ಟಿಕಲ್ ೩೭೦ ರ ರದ್ದತಿಯ ಕ್ರಮದ ಕುರಿತು ಎಲ್ಲ ಅಂಶಗಳನ್ನು ಪರಿಶೀಲಿಸುತ್ತದೆ ಎಂದು ನಾನು ನಂಬುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಪ್ರಾದೇಶಿಕ ಪಕ್ಷಗಳ ಹೆಸರನ್ನು ಹೇಳದೇ ವಾಗ್ದಾಳಿ ನಡೆಸಿದರು. ೩೭೦ ನೇ ವಿಧಿಯ ರದ್ದತಿಯನ್ನು ವಿರೋಧಿಸುತ್ತಿರುವವರು ನೆಲದ ಪರಿಸ್ಥಿತಿ ಮತ್ತು ಜಮ್ಮು ಮತ್ತು ಕಾಶ್ಮೀರದ ಇತಿಹಾಸ ಮತ್ತು ಭೌಗೋಳಿಕತೆಯ ಬಗ್ಗೆ ಅವರಿಗೆ ತಿಳಿದಿಲ್ಲ ಎಂದು ಟಾಂಗ್ ಕೊಟ್ಟರು.
ಸುಪ್ರೀಂ ಕೋರ್ಟ್ ಜಮ್ಮು ಮತ್ತು ಕಾಶ್ಮೀರದ ವಿಶೇಷಸ್ಥಾನಮಾನ ೩೭೦ನೇ ವಿಧಿ ರದ್ದು ಮಾಡಿ, ೨ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಾಗಿಸಿದ್ದರ ವಿರುದ್ಧ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಪ್ರಾರಂಭಿಸಿದೆ. ಆಗಸ್ಟ್ ೨ರಿಂದ ಸುಪ್ರೀಂ ಕೋರ್ಟ್ ನಿತ್ಯ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದೆ
