ಉದಯವಾಹಿನಿ, ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸಿದ ದೆಹಲಿಯ ಆಜಾದ್‌ಪುರ ಮಂಡಿಯಲ್ಲಿ ಕೆಲವು ತರಕಾರಿ ಮತ್ತು ಹಣ್ಣು ಮಾರಾಟಗಾರರು ಮತ್ತು ವ್ಯಾಪಾರಿಗಳೊಂದಿಗೆ ವಿಡಿಯೋ ಸಂವಾದವನ್ನು ಹಂಚಿಕೊಂಡಿದ್ದಾರೆ. ಇದೇ ವೇಳೆ ಹಣದುಬ್ಬರ ಏರಿಕೆ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಸರ್ಕಾರವು ಅವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.
ಸಂಭಾಷಣೆಯ ವಿಡಿಯೋ ತುಣುಕನ್ನು ಹಂಚಿಕೊಂಡಿರುವ ರಾಹುಲ್, ಮಾರುಕಟ್ಟೆಯಲ್ಲಿ ಆರ್ಥಿಕ ಹಿಂಜರಿತವಿದೆಯೇ ಎಂದು ಪ್ರಶ್ನಿಸಿದ್ದಾರೆ. ‘ಕಾಲ ಬದಲಾಗಲಿದೆ, ಭಾರತ ಒಂದಾಗುತ್ತದೆ, ಬಡವರ ಕಣ್ಣೀರು ನಿರ್ನಾಮವಾಗಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.
