ಉದಯವಾಹಿನಿ, ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಪ್ರಿನ್ಸ್ ಮಹೇಶ್ ಬಾಬು ಇಂದು ೪೮ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆ ನೆಚ್ಚಿನ ನಟನಿಗೆ ಕುಟುಂಬಸ್ಥರು ಆಪ್ತರು ಅಪಾರ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಇನ್ನು ಪ್ರೀತಿಯ ಪತಿಗೆ ನಮ್ರತಾ ಶಿರೋಡ್ಕರ್ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದು, ಪತಿ ಬಗ್ಗೆ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಇಬ್ಬರು ಒಟ್ಟಾಗಿ ಇರುವ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಹುಟ್ಟುಹಬ್ಬದ ಶುಭಾಶಯಗಳು ಮಹೇಶ್ ಬಾಬು, ನೀವು ಇಂದಿಗೂ ಎಂದೆಂದಿಗೂ ಖುಷಿಯಾಗಿರಿ, ಜೊತೆಯಾಗಿರಿ ಎಂದು ಶುಭ ಹಾರೈಸಿದ್ದಾರೆ. ಟಾಲಿವುಡ್‌ನ ಬಹುಬೇಡಿಕೆಯ ನಟರಾಗಿರುವ ಪ್ರಿನ್ಸ್ ಮಹೇಶ್ ಬಾಬು ಕೈಯಲ್ಲಿ ಈಗಾಗಲೇ ಹಲವು ಸಿನಿಮಾಗಳಿದ್ದು, ಚಿತ್ರರಂಗದಲ್ಲಿ ಬ್ಯುಸಿಯೆಷ್ಟು ನಟ ಎಂದೇ ಗುರುತಿಸಿಕೊಂಡಿದ್ದಾರೆ. ಸದ್ಯ ಇಂದು ಅವರ ಹುಟ್ಟುಹಬ್ಬವಾದ್ದರಿಂದ ಕುಟುಂಬದ ಜತೆ ಹುಟ್ಟಿದ ದಿನವನ್ನು ಆಚರಿಸಿಕೊಂಡಿದ್ದಾರೆ. ಇನ್ನು ಸಿನಿರಂಗದ ಕಲಾವಿದರು ಹಾಗೂ ಅಭಿಮಾನಿಗಳು ಪ್ರಿನ್ಸ್ ಮಹೇಶ್ ಬಾಬುಗೆ ಶುಭಾಶಯ ತಿಳಿಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!