ಉದಯವಾಹಿನಿ, ನವದೆಹಲಿ, ದೇಶದಲ್ಲಿ ವಿರೋಧ ಪಕ್ಷಗಳು ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕಾರಣವನ್ನು ಮಾಡುತ್ತಿದ್ದು, ಇವುಗಳಿಂದ ಜನತೆ ದೂರ ಇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.
ದೇಶದಲ್ಲಿ ಭ್ರಷ್ಟಾಚಾರ, ರಾಜವಂಶ ನೀತಿ ದೂರವಾಗಬೇಕು. ಇದಕ್ಕೆ ಪ್ರತಿಪಕ್ಷಗಳು ಮತ್ತಷ್ಟು ಪುಷ್ಠಿ ನೀಡುತ್ತಿವೆ ಎಂದು ಅವರು ಟ್ವಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮಹಾತ್ಮ ಗಾಂಧಿಯವರು ಆರಂಭಿಸಿದ ಕ್ವಿಟ್ ಇಂಡಿಯಾ ಚಳವಳಿಯನ್ನು ಸ್ಮರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ಈಗ ಭ್ರಷ್ಟಾಚಾರ, ರಾಜವಂಶ ಮತ್ತು ತುಷ್ಟೀಕರಣದ ವಿರುದ್ಧ ಧ್ವನಿ ಎತ್ತಿದೆ ಎಂದು ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ. ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ ಮಹನೀಯರಿಗೆ ನಮನಗಳು ಎಂದಿರುವ ಅವರು, ಗಾಂಧೀಜಿಯವರ ನೇತೃತ್ವದಲ್ಲಿ ಭಾರತವನ್ನು ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತಗೊಳಿಸುವಲ್ಲಿ ಈ ಚಳವಳಿ ಪ್ರಮುಖ ಪಾತ್ರ ವಹಿಸಿತ್ತು ಎಂದು ಅವರು ಟ್ವೀಟ್ ಮಾಡಿದ್ದಾರೆ. ವಿರೋಧ ಪಕ್ಷಗಳು ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕಾರಣವನ್ನು ಅನುಸರಿಸುತ್ತಿವೆ. ಇದರಿಂದ ದೇಶದ ಜನರು ದೂರ ಇರಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಸದಾ ಎಚ್ಚರವಾಗಿರಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
