
ಉದಯವಾಹಿನಿ ಕೊಡಗು: ಮೈಸೂರು ಗಡಿಭಾಗದ ಕೊಪ್ಪ ಬೈಲಕೊಪ್ಪ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮತ್ತು ಇತರೆ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಕೂಡಲೇ ಎರಡು ಜಿಲ್ಲೆಗಳ ಉಪವಿಭಾಗಗಳ ಅಧಿಕಾರಿಗಳ ಸಭೆಯನ್ನು ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಪೊಲೀಸ್ ಮಹಾನಿರಿಕ್ಷಕ ಡಾ. ಬೋರಲಿಂಗಯ್ಯ ತಿಳಿಸಿದರು. ಕುಶಾಲನಗರದ ಪೊಲೀಸ್ ಠಾಣೆಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು ಕೊಡಗು ಜಿಲ್ಲೆಯಲ್ಲಿ ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಮಾರಾಟ ಮತ್ತು ದಂದೆಯಲ್ಲಿ ತೊಡಗಿರುವ ನೂರಕ್ಕೂ ಅಧಿಕ ಮಂದಿಯನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಕೊಡಗು ಜಿಲ್ಲೆಯ ಪೊಲೀಸ್ ಉನ್ನತಾಧಿಕಾರಿ ನೇತೃತ್ವದಲ್ಲಿ ಎಲ್ಲೆಡೆ ಯಶಸ್ವಿ ಕಾರ್ಯಕ್ರಮ ನಡೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಇವರು ಇಂತಹ ಚಟುವಟಿಕೆಗಳಿಗೆ ಶಾಶ್ವತ ಕಡಿವಾಣ ಹಾಕಲಾಗುವುದು ಎಂದರು. ಕಳೆದ ಒಂದು ತಿಂಗಳಿನಿಂದ ತಾನು ಜಿಲ್ಲೆಗೆ ಎರಡನೇ ಬಾರಿ ಭೇಟಿ ನೀಡುತ್ತಿದ್ದು ಕುಶಾಲನಗರ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಕಾನೂನು ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದರು ಈ ಸಂದರ್ಭ ಕೊಡಗು ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಸುಂದರ್ ರಾಜ್ ಡಿ ವೈ ಎಸ್ ಪಿ ಗಂಗಾಧರಪ್ಪ ಪೊಲೀಸ್ ವ್ಯತ್ತ ನಿರೀಕ್ಷಕ ಮಹೇಶ್ ಪಟ್ಟಣ ಠಾಣಾಧಿಕಾರಿ ಚಂದ್ರಶೇಖರ್ ಅಪರಾಧ ವಿಭಾಗದ ಗೀತಾ ಮತ್ತಿತರರು ಇದ್ದರು
