ಉದಯವಾಹಿನಿ ದೇವರಹಿಪ್ಪರಗಿ: ಪ್ರತಿ ವರ್ಷದಂತೆ ಅ.15 ರಂದು ಆಚರಿಸಲಾಗುತ್ತಿರುವ ಸ್ವಾತಂತ್ರ್ಯೋತ್ಸವ ಸಂಭ್ರಮವು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ ಅದಕ್ಕೆ ಎಲ್ಲಾ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ತಹಶೀಲ್ದಾರ್-2 ಎಸ್ ಎಚ್ ರಾಠೋಡ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರದಂದು ನಡೆದ ಸಭೆಯಲ್ಲಿ ಅ.15 ರಂದು ಆಚರಿಸಲಾಗುತ್ತಿರುವ ಸ್ವಾತಂತ್ರ್ಯೋತ್ಸವದ ಕುರಿತು ಪೂರ್ವಭಾವಿ ಸಭೆಯಲ್ಲಿ ತಹಸಿಲ್ದಾರ್ ಅವರ ಅನುಪಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದ ಅವರು, ಸರ್ಕಾರದ ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರನ್ನು, ವಿಧಾನ ಪರಿಷತ್ ಸದಸ್ಯರನ್ನು, ನಿಗಮ ಮಂಡಳಿ ಅಧ್ಯಕ್ಷರನ್ನು, ಸ್ಥಳೀಯ ಶಾಸಕರನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಅವ್ಹಾನ ನೀಡಲಾಗುವುದು. ಅಲ್ಲದೆ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಗಳಲ್ಲಿ ಶಾಲಾ ಮಕ್ಕಳಿಂದ ವಿವಿಧ ರೀತಿಯ ಮನರಂಜನೆ ಕಾರ್ಯಕ್ರಮಗಳು, ಪ್ರಬಾತಪೇರಿಯ ಮೂಲಕ ಎಸಿಸಿ ವಿದ್ಯಾರ್ಥಿಗಳಿಂದ ಧ್ವಜವಂದನೆ, ಕವಾಯತ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಪ್ರಸ್ತಾವಿಕವಾಗಿ ಶಿರಸ್ತೆದಾರರಾದ ಎಮ್ ಕೆ ದೇಸಾಯಿ ಮಾತನಾಡಿದ ಅವರು, ಹಿಂದಿನ ನಡಾವಳಿ ಪತ್ರವನ್ನು ಓದಿ ಅದ್ದೂರಿ ಸ್ವಾತಂತ್ರೋತ್ಸವದ ಸಂಭ್ರಮಕ್ಕೆ ಎಲ್ಲರ ಸಹಕಾರ ಬೇಕು ಎಂದು ಹೇಳಿದರು.ಹಲವಾರು ಮುಖಂಡರು ಮಾತನಾಡಿ ಸ್ವಾತಂತ್ರೋತ್ಸವದ ಸಂಭ್ರಮಕ್ಕೆ ಸಲಹೆ ಸೂಚನೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ಪ ಪಂ ಮುಖ್ಯಾಧಿಕಾರಿ ಎಲ್ ಡಿ ಮುಲ್ಲಾ, ತಾ ಪಂ ಯೋಜನಾಧಿಕಾರಿಗಳಾದ ಶ್ರೀನಿವಾಸ ಪವಾರ, ಅಬಕಾರಿ ಇಲಾಖೆಯ ಆರತಿ ಖೈನೂರ, ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷರಾದ ಎಸ್ ಎನ್ ಬಸವರಡ್ಡಿ, ಮುಖಂಡರುಗಳಾದ ರಾವುತ್ ತಳಕೇರಿ, ಪ್ರಕಾಶ ಗುಡಿಮನಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!