ಉದಯವಾಹಿನಿಪಣಜಿ : ನಗರದ ಪಬ್‌ವೊಂದರಲ್ಲಿ ಮದ್ಯಪಾನ ಮಾಡಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಗೋವಾ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ)ಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಎ.ಕೋನ್ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಡಿಐಜಿ ಎ.ಕೋನ್ ಅವರು ಹಿಂದೆ ದೆಹಲಿ ಪೊಲೀಸ್‌ನಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ನಿಭಾಯಿಸಿದ್ದರು. ಕಳೆದ ಆ.೭ರಂದು ರಾತ್ರಿ ರಾಜ್ಯದ ಪ್ರಮುಖ ರಾಜಕಾರಣಿಯ ಮಾಲೀಕತ್ವದ ಕ್ಲಬ್‌ನಲ್ಲಿ ಕೋನ್ ಭರ್ಜರಿ ಎಣ್ಣೆ ಪಾರ್ಟಿ ಮಾಡಿ ಕಂಠಮಟ್ಟ ಕುಡಿದು ಮಹಿಳೆಯೊಂದಿಗೆ ಜಗಳವಾಡಿದ್ದಲ್ಲದೆ, ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾರೆ . ಘಟನೆಯ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಡಿಐಜಿ ಮತ್ತು ಮಹಿಳೆ ಮಾತಿನ ಚಕಮಕಿಯಲ್ಲಿ ತೊಡಗಿದ್ದು ಕಂಡಿದೆ. ಕಿರುಕುಳ ನೀಡಿದ ಪೊಲೀಸ್‌ಗೆ ಮಹಿಳೆ ಕಪಾಳಮೋಕ್ಷ ಮಾಡಿದ ಬಳಿಕ ಈ ಘಟನೆ ನಡೆದಿದೆ. ಪ್ರಕರಣದ ಪ್ರಾಥಮಿಕ ತನಿಖೆಯ ಪ್ರಕಾರ, ಡಿಐಜಿ ಕೋನ್ ಘಟನೆಯ ಸಮಯದಲ್ಲಿ ವೈದ್ಯಕೀಯ ರಜೆಯಲ್ಲಿದ್ದರು ಎಂದು ತಿಳಿದುಬಂದಿದೆ. ಘಟನೆಯನ್ನು ಗಮನಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಗೋವಾ ವಿಧಾನಸಭೆಯಲ್ಲೂ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು, ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು ವಿಪಕ್ಷಗಳು ಒತ್ತಾಯಿಸಿದೆ. ಈ ನಡುವೆ ಗೋವಾ ಸರ್ಕಾರ ಡಿಐಜಿ ಸ್ಥಾನದಿಂದ ಕೋನ್‌ಅನ್ನು ವಜಾ ಮಾಡಿದೆ. ಕೋನ್ ೨೦೦೯ರ ಎಜಿಎಂಯುಟಿ ಕೆಡರ್‌ನ ಐಪಿಎಸ್ ಅಧಿಕಾರಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!