ಉದಯವಾಹಿನಿ, ಜೈಪುರ: ರಾಜಸ್ತಾನ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಆಡಳಿತ ಚುಕ್ಕಾಣಿ ಹಿಡಿಯಲು ತಂತ್ರ ರೂಪಿಸಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇತರೆ ಹಿಂದುಳಿದ ಜಾತಿಗಳಿಗೆ ಹೆಚ್ಚುವರಿಯಾಗಿ ಶೇ.೬ ರಷ್ಟು ಮೀಸಲಾತಿ ಪ್ರಕಟಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಇತರ ಹಿಂದುಳಿದ ವರ್ಗಗಳಿಗೆ ಶೇಕಡಾ ೨೧ ರಷ್ಟು ಮೀಲಸಾತಿ ನೀಡಿತ್ತಿದ್ದು ಇದರ ಜೊತೆಗೆ ಈಗ ಮತ್ತೆ ಶೇಕಡಾ ೬ ರಷ್ಟು ನೀಡಲು ಉದ್ದೇಶಿಸಲಾಗಿದೆ ಎಂದಿದ್ಧಾರೆ
ಈ ಹೆಚ್ಚುವರಿ ಮೀಸಲಾತಿಯೊಂದಿಗೆ, ಅತ್ಯಂತ ಹಿಂದುಳಿದ ಜಾತಿಗಳಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಿಗೆ ಹೆಚ್ಚಿನ ಅವಕಾಶಗಳು ಸಿಗುತ್ತವೆ ಎಂದು ಹೇಳಿದ್ದಾರೆ. “ರಾಜಸ್ಥಾನದಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಪ್ರಸ್ತುತ ನೀಡಲಾದ ಶೇಕಡಾ ೨೧ರಷ್ಟು ಮೀಸಲಾತಿಗೆ ಹೆಚ್ಚುವರಿಯಾಗಿ, ಶೆಕಡಾ ೬ರಷ್ಟು ಹೆಚ್ಚುವರಿ ಮೀಸಲಾತಿ ನೀಡಲಾಗುವುದು, ಇತೆರೆ ವರ್ಗದ ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿಡಲಾಗುವುದು” ಎಂದು ಅವರು ತಿಳಿಸಿದ್ದಾರೆ. ಸಮೀಕ್ಷೆ ಒಬಿಸಿ ವರ್ಗದಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಗುರುತಿಸಲು ಒಬಿಸಿ ಆಯೋಗದಿಂದ ಸಮೀಕ್ಷೆ ನಡೆಸಲಾಗುವುದು ಮತ್ತು ಆಯೋಗ ಕಾಲಮಿತಿಯಲ್ಲಿ ವರದಿ ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಎಸ್‌ಸಿ ಮತ್ತು ಎಸ್‌ಟಿಯ ವಿವಿಧ ಸಂಘಟನೆಗಳು ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿಗೆ ನಿರಂತರವಾಗಿ ಒತ್ತಾಯಿಸುತ್ತಿವೆ ಮತ್ತು ಸರ್ಕಾರ ಬೇಡಿಕೆಯನ್ನು ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.
