ಉದಯವಾಹಿನಿ, ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕಾಗುವ ಸಾಧ್ಯತೆ ಇದೆ. ಕಳೆದ ಎರಡು ಮೂರು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದಿಂದ ಉತ್ತಮ ಮಳೆಯಾಗುತ್ತಿದ್ದು ಮುಂದಿನ ಒಂದು ವಾರಗಳವರೆಗೆ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಮುಂದಿನ ವಾರ ಮತ್ತೆ ಚುರುಕುಗೊಳ್ಳಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈನಲ್ಲಿ ಕರಾವಳಿಯಲ್ಲಿ ಅಬ್ಬರಿಸಿದ್ದ ಮಳೆ ಏಕಾಏಕಿ ಕಡಿಮೆಯಾಗಿರುವುದು ಇಲ್ಲಿನ ರೈತರಲ್ಲಿ ಆತಂಕ ಮೂಡಿಸಿದೆ, ಆದರೂ ಮುಂದಿನ ವಾರ ಮಳೆ ಮತ್ತೆ ಚುರುಕುವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿರುವುದು ಆತಂಕವನ್ನು ದೂರವಾಗಿಸಿದೆ.
ಕಳೆದ 24 ಗಂಟೆಯಲ್ಲಿ ರಾಯಚೂರು, ದಾವಣಗೆರೆ, ಮೈಸೂರು, ಹಾಸನ, ಗದಗ, ದಾವಣಗೆರೆ, ಮಂಡ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.
