
ಉದಯವಾಹಿನಿ ದೇವರಹಿಪ್ಪರಗಿ: ನೂತನ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ತಾಲೂಕು ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಪಟ್ಟಣದ ತಾಲೂಕು ಕಚೇರಿಗೆ ಗುರುವಾರದಂದು ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಚೇರಿಗೆ ಹಾಜರಾಗುವ ಸಾರ್ವಜನಿಕರೊಂದಿಗೆ ಸಕರಾತ್ಮಕವಾಗಿ ಸ್ಪಂದಿಸಿ ಅವರ ಕೆಲಸಗಳನ್ನು ಕಾನೂನು ಚೌಕಟ್ಟಿನಲ್ಲಿ ಯಾವುದೇ ವಿಳಂಬ ಮಾಡದೆ ಮಾಡಿಕೊಡಲು ಸ್ಪಷ್ಟ ನಿರ್ದೇಶನ ನೀಡಿದರು.
ನಂತರ ಪ ಪಂ ಕಟ್ಟಡದ ಕಾಮಗಾರಿ ಸೇರಿದಂತೆ ನಾಡಕಚೇರಿ, ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಾಲೂಕಿನ ವಿವಿಧ ಕಚೇರಿ ಹಾಗೂ ಕಾಮಗಾರಿಗಳನ್ನು ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ, ನೂತನ ತಾಲೂಕಿನ ಅಭಿವೃದ್ಧಿಗಾಗಿ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಜಿಲ್ಲಾಡಳಿತದಿಂದ ಸಹಕಾರ ನೀಡುತ್ತೇನೆ. ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಸಮಸ್ಯೆ ಆಗದ ಹಾಗೆ ಫಲಾನುಭವಿಗಳಿಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ ಹಾಗೂ ನೂತನ ತಾಲೂಕು ಕಚೇರಿಗಾಗಿ ಸ್ಥಳ ಪರಿಶೀಲನೆ ಮಾಡಿ ಸಾರ್ವಜನಿಕರೊಂದಿಗೆ ಮಾತನಾಡಿ ಕುಂದು ಕೊರತೆಗಳನ್ನು ಆಲಿಸಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಕಾಶ ಸಿಂದಗಿ,ಪ ಪಂ ಮುಖ್ಯಾಧಿಕಾರಿ ಎಲ್ ಡಿ ಮುಲ್ಲಾ, ತಹಶೀಲ್ದಾರ್ -2 ಎಸ್ ಎಚ್ ರಾಠೋಡ, ಶಿರಸ್ತೆದಾರರುಗಳಾದ ಮಹಿಪತಿ ದೇಸಾಯಿ, ಎಸ್ ಎಸ್ ತಾವರಖೇಡ, ಇಂದಿರಾ ಬಳಗನೂರ, ಕೃಷಿ ಇಲಾಖೆ ಅಧಿಕಾರಿ ಸೋಮನಗೌಡ ಬಿರಾದಾರ, ಪಿಎಸ್ಐ ಆರ್ ವೈ ಬೀಳಗಿ,ಡಾ ಯೋಗೇಶ್,ತಾಪಂ ಯೋಜನಾಧಿಕಾರಿ ಶ್ರೀನಿವಾಸ್ ಪವಾರ,ಸರ್ಕಲ್ ಗುಮಾಸ್ತೆ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು,ಕಂದಾಯ,ಪ ಪಂ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
