
ಉದಯವಾಹಿನಿ ನಾಗಮಂಗಲ: ಸಚಿವ ಚಲುವರಾಯಸ್ವಾಮಿ ವಿರುದ್ದ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ಸುಳ್ಳು ದೂರು ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ನಾಗಮಂಗಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಅವರು ನಾಗಮಂಗಲ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ,ಮಾಜಿ ಶಾಸಕ ಸುರೇಶ್ ಗೌಡ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಜಾತ್ಯತೀತ ಜನತಾದಳ ಪಕ್ಷದ ನಾಯಕರು ವ್ಯವಸ್ಥಿತ ಷಡ್ಯಂತ್ರ ರೂಪಿಸಿ ಸಚಿವರ ಹೆಸರಿಗೆ ಕಳಂಕ ತರಲು ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಿದ್ದಾರೆ, ಸಚಿವರಾದ ಚೆಲುವರಾಯಸ್ವಾಮಿ ಅವರ ರಾಜಕೀಯ ಏಳಿಗೆ ಸಹಿಸದೆ ಹುನ್ನಾರ ಮಾಡಿದ್ದಾರೆ ಎಂದು ದೂರಿದರು.ದ್ವೇಷದ ರಾಜಕಾರಣ ಮಾಡುತ್ತಿರುವ ಜೆಡಿಎಸ್ ನಾಯಕರು,ಸಚಿವ ಚೆಲುವರಾಯಸ್ವಾಮಿ ಜನಪ್ರಿಯತೆ ಸಹಿಸದೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ನಕಲಿ ಸಹಿ ಬಳಸಿ ಇಲ್ಲ ಸಲ್ಲದ ಆರೋಪಗಳನ್ನು ಸೃಷ್ಟಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ವ್ಯವಸ್ಥಿತ ಷಡ್ಯಂತ್ರವಾಗಿದೆ. ಸಚಿವರಿಗೆ ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ತಂದು ಕಳಂಕ ತರಲು ಕಿಡಿಗೇಡಿಗಳು ಸೃಷ್ಟಿಸಿರುವ ನಕಲಿ ಪತ್ರವಾಗಿದೆ ಎಂದು ದೂರಿದರು.
ಜನಪ್ರತಿನಿಧಿಗಳ ಮೇಲೆ ಅಧಿಕಾರಿಗಳ ಹೆಸರಿನಲ್ಲಿ ನಕಲಿ ದೂರು ಸಲ್ಲಿಸಿ ಬ್ಲಾಕ್ ಮೇಲ್ ತಂತ್ರ ಬಳಸುವ ಮೂಲಕ ಜನಪ್ರತಿನಿಧಿಗಳನ್ನು ಬೆದರಿಸುವ ಬಹುದೊಡ್ಡ ಗುಂಪು. ಇದರ ಹಿಂದೆದೊಡ್ಡ ಚಾಲವೇ ಅಡಗಿದೆ. ಇಂತಹವರನ್ನು ಪತ್ತೆಹಚ್ಚಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೂಕ್ತ ಕಾನೂನುಕ್ರಮಕೈಗೊಳ್ಳಬೇಕೆಂದು ಡಿವೈಎಸ್ಪಿ ರವರಿಗೆ ಮನವಿ ಸಲ್ಲಿಸಿದರು.ಮುಖಂಡರಾದ ಜವರೇಗೌಡ, ಎಂ ಪ್ರಸನ್ನ, ರಾಜೇಶ್, ಕೃಷ್ಣೆಗೌಡ ನರಸಿಂಹಮೂರ್ತಿ ತಿಮ್ಮರಾಯಗೌಡ.ಹನುಮಂತು ಹಾಗೂ ಪುಟ್ಟಮ್ಮ ಮಾಯಣ್ಣ ಗೌಡ ಯಶೋದಮ್ಮ ಹಾಗೂ ಕಾಂಗ್ರೆಸ್ ಕಟಕದ ಮಹಿಳಾ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರುಗಳು ಕಾರ್ಯಕರ್ತರು ಭಾಗವಹಿಸಿದ್ದರು.
