
ಉದಯವಾಹಿನಿ, ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ಆಧಾರ ರಹಿತ ಆರೋಪ ಮಾಡಿ ವದಂತಿ ಹಬ್ಬಿಸಿ ಜನರ ಶಾಂತಿಗೆ ಭಂಗ ತರುವ ಪ್ರಯತ್ನ ಮಾಡಿದ್ದಾರೆ ಎಂದು ಕಾಂಗ್ರೆಸ್ ದೂರು ನೀಡಿದೆ.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸುಳ್ಳು, ಅಪಪ್ರಚಾರ, ಆಧಾರರಹಿತ ಆರೋಪಗಳ ಮೂಲಕ ರಾಜ್ಯದ ಜನ
ರ ದಾರಿ ತಪ್ಪಿಸುತ್ತಿರುವ ನಳೀನ್ಕುಮಾರ್ ಕಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಯಾರೂ ಕಮಿಷನ್ ಕೇಳಿಲ್ಲ : ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿನ್ನೆ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅದನ್ನು ಗುತ್ತಿಗೆದಾರರ ಆತ್ಮಹತ್ಯೆ ಎಂದು ನಳೀನ್ಕುಮಾರ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸರ್ಕಾರವೇ ಹೊಣೆ ಎಂದು ಆರೋಪಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರೇ ಮೃತಪಟ್ಟ ವ್ಯಕ್ತಿ ಗುತ್ತಿಗೆದಾರರಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ಇದರ ಹೊರತು ನಳೀನ್ಕುಮಾರ್ ಹೇಳಿಕೆ ಶಾಂತಿಭಂಗ ಉಂಟು ಮಾಡುತ್ತಿದೆ ಎಂದು ದೂರಲಾಗಿದೆ.
