ಉದಯವಾಹಿನಿ,
ಲಖ್ನೋ: ಉತ್ತರ ಪ್ರದೇಶ ಸಂಭಾಲ್ನ ಬಿಜೆಪಿ ಮುಖಂಡ ಅನುಜ್ ಚೌಧರಿ ಅವರನ್ನು ಮೊರಾದಾಬಾದ್ನಲ್ಲಿರುವ ಅವರ ನಿವಾಸದ ಹೊರಗೆ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 34 ವರ್ಷದ ಚೌಧರಿ ತಮ್ಮ ಅಪಾರ್ಟ್ಮೆಂಟ್ನ ಹೊರಗೆ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್ನಲ್ಲಿ ಬಂದ ಮೂವರು ಅನೇಕ ಬಾರಿ ಗುಂಡು ಹಾರಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಾಣಬಹುದು. ಚೌಧರಿ ಅವರನ್ನು ಮೊರಾದಾಬಾದ್ನ ಬ್ರೈಟ್ಸ್ಟಾರ್ ಆಸ್ಪತ್ರೆಗೆ ಕೂಡಲೇ ಕರೆದೊಯ್ಯಲಾಯಿತು. ಸ್ಥಳೀಯ ರಾಜಕೀಯದಲ್ಲಿ ಸಕ್ರಿಯರಾಗಿರುವ ಚೌಧರಿ ಅವರು ಸಂಭಾಲ್ನ ಅಸ್ಮೋಲಿ ಬ್ಲಾಕ್ನಿಂದ ಬ್ಲಾಕ್ ಮುಖ್ಯಸ್ಥರ ಚುನಾವಣೆಯಲ್ಲಿ ಸ್ರ್ಪಸಿದರು ಆದರೆ ಯಶಸ್ವಿಯಾಗಿರಲಿಲ್ಲ. ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
ಕಮೀಷನ್ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಡಿಕೆಶಿ ಓಪನ್ ಚಾಲೆಂಜ್
ಕುಟುಂಬವು ಅಮಿತ್ ಚೌಧರಿ ಮತ್ತು ಅನಿಕೇತ್ ಮೇಲೆ ದೂರು ದಾಖಲಿಸಿದೆ. ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೊರಾದಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ.
