
ಉದಯವಾಹಿನಿ ಕೋಲಾರ :- ಜಿಲ್ಲೆ ಮತ್ತು ತಾಲೂಕಿನ ನರಸಾಪುರ ಹೋಬಳಿ ಬೆಳ್ಳೂರು ಗ್ರಾಮ ಪಂಚಾಯಿತಿ 2ನೇ ಅವಧಿಗೆ ಅಧ್ಯಕ್ಷೆ ಮತ್ತು ಉಪಾಧ್ಯಕ್ಷ ಚುನಾವಣೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆ ಯಾಗಿ ಅಪ್ಪಸಂದ್ರ ಗ್ರಾಮದ ಸರೋಜಮ್ಮ ಹಾಗೂ ಉಪಾಧ್ಯಕ್ಷೆಯಾಗಿ ಉದ್ದಪ್ಪನಹಳ್ಳಿ ಗ್ರಾಮದ ಮಂಜುಳಾ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಚುನಾವಣಾ ಅಧಿಕಾರಿ ಹಾಗೂ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್ವರ್ ಜಿ ತಿಳಿಸಿರುತ್ತಾರೆ. ಬೆಳ್ಳೂರು ಗ್ರಾಮ ಪಂಚಾಯತಿಯು ಕಾಂಗ್ರೆಸ್ ಪಕ್ಷದ ವಶವಾಗಿದೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾದ ಸರೋಜಮ್ಮ ಮಾತನಾಡಿ ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಎಲ್ಲರ ಜೊತೆ ಹೊಂದಾಣಿಕೆ ಮಾಡಿಕೊಂಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂದರು, ಆಯ್ಕೆಯಾದ ಅಧ್ಯಕ್ಷೇ ಮತ್ತು ಉಪಾಧ್ಯಕ್ಷೆಗೆ ಹಾಗೂ ಅವರ ಸಮಿತಿಗೆ ಕೋಲಾರ ಶಾಸಕ ಕೊತ್ತೂರು ಜಿ ಮಂಜುನಾಥ್ ಹಾಗೂ ವಿಧಾನಪರಿಷತ್ ಸದಸ್ಯ ಅನಿಲ್ ಕುಮಾರ್ ಶುಭಕೋರಿರುತ್ತಾರೆ,
ಈ ಸಂದರ್ಭದಲ್ಲಿ ಪಂಚಾಯತಿಯ 20 ಮಂದಿ ಸದಸ್ಯರು, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವೆಂಕಟಸ್ವಾಮಿ, ಮಾಜಿ ಉಪಾಧ್ಯಕ್ಷ ಎಸ್ ಕೃಷ್ಣಪ್ಪ, ತಾಲೂಕು ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಅಶ್ವತ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಪರಾಜ್ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಕಾಂಗ್ರೆಸ್ ಮುಖಂಡರುಗಳು ಹಾಜರಿದ್ದರು.
