
ಉದಯವಾಹಿನಿ ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಕೆರೆಗುಡ್ಡದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸ್ಥಳೀಯ ಸೂರಜ್ ಫೌಂಡೇಶನ್ ಸಂಸ್ಥಾಪಕಿ ಹಾಗೂ ಕ್ಷೇತ್ರದ ಬಿಜೆಪಿ ಮಹಿಳಾ ಹಿರಿಯ ನಾಯಕಿ ಶ್ರೀಮತಿ ಸುಜಾತ ಮುನಿರಾಜು ಅವರ ನೇತೃತ್ವದಲ್ಲಿ ಕೆರೆಗುಡ್ಡದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸುವ ಕಾರ್ಯ ಕ್ರಮ ಆಯೋಜಿಸಲಾಗಿತ್ತು.
ಕ್ಷೇತ್ರದ ಶಾಸಕ ಎಸ್.ಮುನಿರಾಜು ಅವರ ಅಮೃತ ಹಸ್ತದಿಂದ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು.
ನಂತರ ಈಗಿನ ಮಕ್ಕಳು ಮುಂದಿನ ಪ್ರಜಾಗಳು ಎನ್ನುವ ಹಾಗೆ ನೀವು ಚೆನ್ನಾಗಿ ವಿದ್ಯಾ ಅಭ್ಯಾಸ ಮಾಡಬೇಕು ದಿನ ನಿತ್ಯ ನಿಮ್ಮ ಗುರುಗಳು ಹೇಳಿದ ಪಾಠವನ್ನು ಅರ್ಥ ಮಾಡಿಕೊಂಡು ಓದಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಶಾಲೆಗೆ ಶಿಕ್ಷಕ ಶಿಕ್ಷಕಿಯರಿಗೆ ಮತ್ತು ತಮ್ಮ ತಂದೆ ತಾಯಿಗೆ ಹಾಗು ಊರಿಗೆ ಕೀರ್ತಿ ತರಬೇಕು ಎಂದು ಶಾಸಕ ಎಸ್ ಮುನಿರಾಜು ಮಕ್ಕಳಿಗೆ ಶುಭ ಕೋರಿ ಮಾತಾಡಿದರು.
ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಹಿರಿಯ ಮುಖಂಡ ಜಿ.ಮರಿಸ್ವಾಮಿ. ಸೂರಜ್ ಫೌಂಡೇಶನ್ ಸಂಸ್ಥಾಪಕಿ ಶ್ರೀಮತಿ ಸುಜಾತ ಮುನಿರಾಜು, ಬಿಜೆಪಿ ಹಿರಿಯ ಮುಖಂಡ ರಾಜೇಂದ್ರ, ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸೋಮಶೇಖರ್, ಪ್ರದಾನ ಕಾರ್ಯದರ್ಶಿ ವಿನೋದ್ ಗೌಡ ಸೇರಿದಂತೆ ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕ ಶಿಕ್ಷಕಿಯರು ಸಮಸ್ತ ನಾಗರಿಕರು ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
