
ಉದಯವಾಹಿನಿ ರಾಮನಗರ: ತಾಲೂಕಿನ ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಅರ್ಪಿತ ಹರೀಶ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಚಿಕ್ಕಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾದರು.ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಅವಿರೋಧ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅರ್ಪಿತ ಹರೀಶ್ ಕುಮಾರ್ ಅವರು ವೃತ್ತಿಯಲ್ಲಿ ವಕೀಲರಾಗಿದ್ದು ಇವರ ಪ್ರತಿಯು ಸಹ ವಕೀಲರಾಗಿ ವೃತ್ತಿ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮ ಪಂಚಾಯತಿಯಲ್ಲಿ ಆಯ್ಕೆಯಾಗಿರುವ ಸದಸ್ಯರಲ್ಲಿ ಉನ್ನತ ಶಿಕ್ಷಣವನ್ನು ಪಡೆದಿರುವ ಅರ್ಪಿತ ಅವರನ್ನು ಚುನಾಯಿತ ಎಲ್ಲಾ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿರುವುದು ಗ್ರಾಮಸ್ಥರಲ್ಲಿ ಹರ್ಷವನ್ನು ಉಂಟು ಮಾಡಿದೆ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅರ್ಪಿತ ಹರೀಶ್ ಕುಮಾರ್ ಅವರನ್ನು ಮೈಸುರು ಮಾಜಿ ಮೇಯರ್ ಅನಂತ್ ರವರು ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಭಿನಂದಿಸಿದರು. ಇದೆ ಸಂಧರ್ಭದಲ್ಲಿ ಸಮಗ್ರ ಕರ್ನಾಟಕ ಕಾರ್ಮಿಕರ ಸಂಘದ ಎನ್ ಜಿಓ ಮಹಿಳಾ ಸದಸ್ಯರುಗಳು ಅರ್ಪಿತ ಅವರಿಗೆ ಶುಭಕೋರಿದರು.
