ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಚೆನ್ನೈ ನ್ಯಾಯಾಲಯವು, ಆರು ತಿಂಗಳು ಜೈಲು ಶಿಕ್ಷೆ ಜತೆಗೆ ₹5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಜಯಪ್ರದಾ ಅವರು ಚೆನ್ನೈನಲ್ಲಿ ರಾಮ್​ ಕುಮಾರ್​ ಮತ್ತು ರಾಜ ಬಾಬು ಜತೆಗೆ ಸೇರಿ ಎರಡು ಚಿತ್ರಮಂದಿರ ನಡೆಸುತ್ತಿದ್ದರು. ಚಿತ್ರಮಂದಿರದಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯವರು ಇಎಸ್​ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು. ಆದರೆ, ಅದನ್ನು ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಪಾವತಿ ಮಾಡುತ್ತಿರಲಿಲ್ಲ. ತಮ್ಮ ಪಾಲಿನ ಇಎಸ್​ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ಆರೋಪಿಸಿ, ರಾಜ್ಯ ವಿಮಾ ನಿಗಮದ ವಿರುದ್ಧ ದೂರು ದಾಖಲಿಸಿದ್ದರು. ಬಳಿಕ ಸರ್ಕಾರಿ ಕಾರ್ಮಿಕರ ವಿಮಾ ನಿಗಮವು ಜಯಪ್ರದಾ ವಿರುದ್ಧ ಚೆನ್ನೈನ ಎಗ್ಮೋರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು.

Leave a Reply

Your email address will not be published. Required fields are marked *

error: Content is protected !!