ಉದಯವಾಹಿನಿ ಕುಶಾಲನಗರ :- ನಗರದ ಕೋಟೆಯಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗುರುವಾರ ಪರಿಶೀಲಿಸಿದರು.
ಕೋಟೆಯ ನೆಲ ಮಹಡಿ ಮತ್ತು ಮೊದಲ ಮಹಡಿ ಕಾಮಗಾರಿ ವೀಕ್ಷಿಸಿದರು. ಹಾಗೆಯೇ ಕೋಟೆಯ ಸುತ್ತಮುತ್ತಲಿನ ಎಲ್ಲಾ ಕಡೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಗರದ ಕೋಟೆಯು ಹೃದಯ ಭಾಗದಲ್ಲಿದ್ದು, ಜಿಲ್ಲಾ ಕೇಂದ್ರ ಮಡಿಕೇರಿಯ ಕೋಟೆಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸಬೇಕು ಎಂದರು. ಸರ್ಕಾರ ನಗರದ ಕೋಟೆ ಅಭಿವೃದ್ಧಿಗೆ 10.76 ಕೋಟಿ ರೂ ಬಿಡುಗಡೆ ಮಾಡಿದ್ದು, ಕೋಟೆ ನವೀಕರಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪುರಾತತ್ವ ಇಲಾಖೆಯ ಬಿಪಿನ್‌ಚಂದ್ರ ನೇಗಿ ಅವರು ಛಾವಣಿ ಕೆಲಸ ಪೂರ್ಣಗೊಂಡಿದ್ದು, ಪ್ಲಾಸ್ಟಿಂಗ್ ಕಾರ್ಯ ಪೂರ್ಣಗೊಳ್ಳುವ ಹಂತದಲ್ಲಿದೆ. ಪಾಲಿಶ್ ಕೆಲಸ ಜೊತೆಗೆ ಸುಣ್ಣ ಬಣ್ಣ ಕೆಲಸ ಭರದಿಂದ ಸಾಗಿದ್ದು, ಡಿಸೆಂಬರ್ ವೇಳೆಗೆ ಕೋಟೆಯ ನವೀಕರಣ ಕಾಮಗಾರಿ ಕೆಲಸ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಪುರಾತತ್ವ ಇಲಾಖೆಯ ಸೋಮ್ಲ ನಾಯಕ್, ಸುನಿಲ್ ಕುಮಾರ್, ಇತರರು ಕೋಟೆ ನವೀಕರಣ ಕಾಮಗಾರಿ ಸಂಬ0ಧಿಸಿದ0ತೆ ಹಲವು ಮಾಹಿತಿ ನೀಡಿದರು.
ಸ್ಥಳ ಪರಿಶೀಲನೆ: ಇದೇ ಆಗಸ್ಟ್, ೧೫ ರಂದು ನಡೆಯುವ ಸ್ವಾತಂತ್ರö್ಯ ದಿನಾಚರಣೆಯನ್ನು ನಗರದ ಕೋಟೆ ಆವರಣದಲ್ಲಿ ಹಮ್ಮಿಕೊಂಡಿರುವ ಹಿನ್ನೆಲೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಡಿವೈಎಸ್‌ಪಿ ಜಗದೀಶ್, ಸಿಪಿಐ ಅನೂಪ್ ಮಾದಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವೈ.ಎಸ್.ಸಿದ್ದೇಗೌಡ, ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ ಗಿರೀಶ್, ಸಹಾಯಕ ಎಂಜಿನಿಯರ್ ಸತೀಶ್, ಪೊಲೀಸ್ ಇಲಾಖೆಯ ಆರ್‌ಎಸ್‌ಐ ರಾಕೇಶ್, ಪಿಎಸ್‌ಐ ಶ್ರೀನಿವಾಸ್ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!