ಉದಯವಾಹಿನಿ ಕೆ.ಆರ್.ಪೇಟೆ. ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ವತಿಯಿಂದ ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು ರವರನ್ನು ಆದಿಚುಂಚನಗಿರಿ ಪೀಠಾಧ್ಯಕ್ಷ ಜಗದ್ಗುರು ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಶ್ರೀಶ್ರೀ ಬಸವಜಯಮೃತ್ಯುಂಜಯ ಮಹಾಸ್ವಾಮೀಜಿ ಅಭಿನಂದಿಸಿದರು.
ಬೆ0ಗಳೂರಿನ ಸರ್ ಪುಟ್ಟಣ್ಣಶೆಟ್ಟಿ ಪುರಭವನದಲ್ಲಿ ನಡೆದ ಜಾನಪದ ಸಂಭ್ರಮ ರಾಜ್ಯಮಟ್ಟದ ೨೦೨೩ ನೇ ಸಾಳಿನ ಸಾಧಕರಿಗೆ ಮತ್ತು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಕಿರಿಯ ವಯಸ್ಸಿನಲ್ಲಿಯೇ ಜನಸೇವೆಯ ಮೂಲಕ ತಾಲ್ಲೂಕಿನಲ್ಲಿ ಶಾಸಕರಾಗಿದ್ದು. ಇದೇ ಮೊದಲಬಾರಿಗೆ ವಿಧಾನಸಭೆಯ ಚುನಾವಣೆ ಎದುರಿಸಿ ಅಂದಿನ ಬಿಜೆಪಿ ಸರ್ಕಾರದ ಪ್ರಭಾವಿ ಸಚಿವರ ವಿರುದ್ದ ಚುನಾವಣೆಯಲ್ಲಿ ಸ್ಪರ್ದಿಸಿ ಅಭೂತಪೂರ್ವ ಜಯಗಳಿಸಿ ನಂತರ ಕ್ಷೇತ್ರದಾದ್ಯಂತ ಸಂಚರಿಸಿ ಜನಸಾಮಾನ್ಯರೊಂದಿಗೆ ಸ್ಪಂಧಿಸಿ ಕೆಲಸ ಮಾಡುತ್ತಿರುವ ಕಾರ್ಯವೈಖರಿಯನ್ನು ಶ್ಲಾಘಿಸಿದ ಶ್ರೀಗಳು ಅವರನ್ನು ಅಭಿನಂದಿಸಿ ಇನ್ನೂ ಉನ್ನತ ಮಟ್ಟದಲ್ಲಿ ಜನಸೇವೆ ಮಾಡುವಂತೆ ಹಾಗೂ ಮುಂದಿನ ದಿನಗಳಲ್ಲಿ ರಾಜಕಾರಣದಲ್ಲಿ ಒಳ್ಳೆಯ ಸ್ಥಾನಮಾನಗಳು ಸಿಗಲಿ ಎಂದು ಹರಸಿ ಶುಭಕೋರಿದರು.
