
ಉದಯವಾಹಿನಿ ಕೊಲ್ಹಾರ: ಸಚಿವ ಶಿವಾನಂದ ಪಾಟೀಲ್ ಗುರುವಾರ ಕೊಲ್ಹಾರ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಅಧಿಕಾರಿಗಳೊಂದಿಗೆ ಮುಂಜಾನೆ ಪಟ್ಟಣಕ್ಕೆ ಆಗಮಿಸಿದ ಸಚಿವರು ಪ್ರವಾಸಿ ಮಂದಿರದಲ್ಲಿ ಕೆಲವು ಗಂಟೆಗಳ ಕಾಲ ಸಭೆ ನಡೆಸಿದರು. ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಪಟ್ಟಣದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು. ಪುನರ್ವಸತಿ ಪುನರ್ ನಿರ್ಮಾಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ: ಕೊಲ್ಹಾರ ಪಟ್ಟಣ ಪುನರ್ವಸತಿ ಕೇಂದ್ರವಾಗಿದ್ದು ನಿವೇಶನಗಳ ಅಕ್ರಮ ಹಿನ್ನೆಲೆಯಲ್ಲಿ ಪುನರ್ವಸತಿ ಪುನರ್ ನಿರ್ಮಾಣ ಇಲಾಖೆಯ ಅಧಿಕಾರಿಗಳೊಂದಿಗೆ ಗೌಪ್ಯ ಸಭೆ ನಡೆಸಿದರು. ಸುಮಾರು ಗಂಟೆಗಳ ಕಾಲ ಸಭೆ ನಡೆಸಿ ನಿವೇಶನಗಳ ವಿತರಣೆಯಲ್ಲಿ ನೈಜ ಸಂತ್ರಸ್ತರಿಗೆ ಅನ್ಯಾಯವಾಗಿದೆ ಅಧಿಕಾರಿಗಳು ಎಚ್ಚೆತ್ತುಕೊಂಡು ಅಕ್ರಮವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದರು ಎಂದು ತಿಳಿದುಬಂದಿದೆ.
ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ವಿವಿಧ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಜೊತೆಗೆ ಮುಖ್ಯವಾಗಿ ಪುನರ್ವಸತಿ ಕೇಂದ್ರವಾದ ಕೊಲ್ಹಾರ ಪಟ್ಟಣದಲ್ಲಿ ನಿವೇಶನಗಳ ವಿತರಣೆಯಲ್ಲಿ ಅಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಕ್ರಮ ನಿವೇಶನಗಳನ್ನು ರದ್ದುಪಡಿಸಿ ನೈಜ ಸಂತ್ರಸ್ತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವಿವಿಧ ಸರಕಾರಿ ಕಟ್ಟಡಗಳಿಗೆ ಸ್ಥಳದ ಅವಶ್ಯಕತೆ ಇದ್ದು ಅವುಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದರು.
ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ತರಾಟೆ: ಒಳಚರಂಡಿ ಕಾಮಗಾರಿ ಸ್ಥಳ ಪರಿಶೀಲನೆ ವೇಳೆ ಕಾಮಗಾರಿ ಸ್ಥಳದಲ್ಲಿ ರಸ್ತೆ ಹಾಗೂ ಸೂಕ್ತ ಮೆಟ್ಟಿಲುಗಳ ಸೂಕ್ತ ಸರಿಯಾದ ವ್ಯವಸ್ಥೆ ಇಲ್ಲದಿರುವುದನ್ನು ಕಂಡು ಕಾರ್ಯನಿರ್ವಾಹಕ ಅಭಿಯಂತರರ ಎಸ್.ಎಸ್ ಮಂಜನಾಳ ಹಾಗೂ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.
ಈ ವೇಳೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು
ಸಚಿವರ ಹಿಂದೆ ನಾಯಕರ ಮತ್ತು ಕಾರ್ಯಕರ್ತರು ದರ್ಬಾರ್:
ಸಚಿವ ಶಿವಾನಂದ ಪಾಟೀಲ್ ಸಾರ್ವಜನಿಕರ ಕುಂದು ಕೊರತೆ ಸಭೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಅಹವಾಲು ಸ್ವೀಕರಿಸಲು ಬಂದ ಸಾರ್ವಜನಿಕರಿಗೆ ಅವಕಾಶ ಸಿಗದಂತಹ ಸ್ಥಿತಿ ವಾತಾವರಣ ನಿರ್ಮಾಣವಾಗಿತ್ತು.
ಸಚಿವರಿಗೆ ಮನವಿ ಸಲ್ಲಿಸಲು ಸಾರ್ವಜನಿಕರು ಕೆಲವು ಗಂಟೆಗಳ ಸುಡುವ ಬಿಸಿಲಿನಲ್ಲಿ ಕಾಯುತ್ತಿದ್ದರೆ. ಸಚಿವರ ಹಿಂದೆ ಹಿಂದೆ ಹಿಂಬಾಲಕರು ಹಾಗೂ ಕಾರ್ಯಕರ್ತರು ಸಚಿವರನ್ನು ಮುತ್ತಿಕೊಂಡಿರುವುದರಿಂದ ಸಾರ್ವಜನಿಕರಿಗೆ ಕಷ್ಟದ ಅಹವಾಲು ಸ್ವೀಕರಿಸಲು ಅನಿವಾರ್ಯವಾಯಿತು ಎಂದು ತಮ್ಮ ಆಕ್ರೋಶವನ್ನು ಮಾಧ್ಯಮದ ಮುಂದೆ ವ್ಯಕ್ತಪಡಿಸಿಕೂಂಡ *ದಲಿತ ಮುಖಂಡ, ತಿಪ್ಪಣ್ಣ ಕುದುರಿ
