
ಉದಯವಾಹಿನಿ,ತಮಿಳುನಾಡು : ಕೋಟಿ 10 ಲಕ್ಷ ಬಹುಮಾನ ಘೋಷಿಸಿದ ತಮಿಳುನಾಡು ಸಿಎಂ ಸ್ಟ್ಯಾಲಿನ್
ಮಲೇಷ್ಯಾವನ್ನು 4-3 ಗೋಲುಗಳಿಂದ ಸೋಲಿಸಿದ ಭಾರತ ಪುರುಷರ ಹಾಕಿ ತಂಡ ಚೆನ್ನೈನಲ್ಲಿ ಶನಿವಾರ ರಾತ್ರಿ ನಡೆದ ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ರೋಚಕ ಫೈನಲ್‌ನಲ್ಲಿ ಮಲೇಷ್ಯಾವನ್ನು 4-3 ಗೋಲುಗಳಿಂದ ಸೋಲಿಸಿ, ನಾಲ್ಕನೇ ಬಾರಿ ಪ್ರಶಸ್ತಿ ಗೆದ್ದ ಭಾರತ ಪುರುಷರ ಹಾಕಿ ತಂಡಕ್ಕೆ ತಮಿಳುನಾಡು ಸಿಎಂ ಒಂದು ಕೋಟಿ 10 ಲಕ್ಷ ಬಹುಮಾನ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್, ‘4ನೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದಿರುವ ಟೀಮ್‌ಇಂಡಿಯಾಕ್ಕೆ ಅಭಿನಂದನೆಗಳು. ನಿಮ್ಮ ಸಾಧನೆ ಗಮನಾರ್ಹವಾದದ್ದು. ಭಾರತ ತಂಡದ ಅದ್ಭುತ ಗೆಲುವಿಗಾಗಿ 1,10,00,000 ಬಹುಮಾನವನ್ನು ಘೋಷಿಸಲು ನನಗೆ ಸಂತೋಷವಾಗುತ್ತಿದೆ’ ಎಂದು ತಿಳಿಸಿದ್ದಾರೆ.
